HomeKarnatakaBIG NEWS : ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಆದೇಶ

BIG NEWS : ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಲಾಗಿದೆ.

ಈ ದಿನಾಂಕದ ಪೂರ್ವದಲ್ಲಿ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದಲ್ಲಿ ಅಥವಾ ಆಯ್ಕೆ ಪ್ರಕ್ರಿಯೆ ಪ್ರಾರಂಭಗೊಂಡಿದ್ದಲ್ಲಿ ಅಂತಹ ನೇಮಕಾತಿಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ವಯವೇ ಪೂರ್ಣಗೊಳಿಸಬಹುದಾಗಿದೆ.ಮೇಲ್ಕಂಡ ಸೂಚನೆಗಳನ್ನು ಎಲ್ಲಾ ಆಯ್ಕೆ ಪ್ರಾಧಿಕಾರಗಳು/ನೇಮಕಾತಿ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular