ಬೆಂಗಳೂರು : ಡೀಸೆಲ್, ಹಾಲು, ವಿದ್ಯುತ್ ದರ ಏರಿಕೆ ನಡುವೆ ಮದ್ಯಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದಲ್ಲಿ ಬಿಯರ್ ದರ 20. ರೂ ಏರಿಕೆಯಾಗುವ ಸಾಧ್ಯತೆಯಿದೆ.
ಹೌದು, ಬಿಯರ್ ದರವನ್ನು ಪ್ರಸ್ತುತ ಇರುವ ದರಕ್ಕಿಂತ ಬಾಟಲ್ ಗೆ 20 ರೂ ನಷ್ಟು ಹೆಚ್ಚಳ ಮಾಡಲು ಸಿದ್ದತೆ ನಡೆಸಲಾಗಿದೆ. ಹಾಗೂ ಇದಕ್ಕೆ ಆಕ್ಷೇಪಣೆ ಸಲ್ಲಿಸಲು 7 ದಿನ ಅವಕಾಶ ನೀಡಲಾಗಿದೆ.ಹಾಗೂ ಬ್ರಾಂಡಿ, ವಿಸ್ಕಿ, ರಮ್, ಜಿನ್ ಮುಂತಾದ ಮದ್ಯಗಳ ದರವನ್ನು ಪ್ರತಿ ಕ್ವಾರ್ಟ್ರ ಗೆ 10 ರಿಂದ 13 ರು.ವರೆಗೆ ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ.
ಅಬಕಾರಿ ಇಲಾಖೆ ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ನಾಗರಿಕರಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಿದೆ. ಇದೀಗ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ.205ಕ್ಕೆ ಹೆಚ್ಚಿಸುವ ಬಗ್ಗೆ ಅಧಿಸೂಚನೆ ಯಲ್ಲಿ ಉಲ್ಲೆ ಖಿಸಲಾಗಿದೆ. ಇದರೊಂದಿಗೆ ಪ್ರೀಮಿಯಂ ಅಥವಾ ಇತರೆ ಬಿಯರ್ ಬ್ಯಾಂಡ್ಗಳ ಬೆಲೆಯು ಉತ್ಪಾದನಾ ವೆಚ್ಚವನ್ನು ಅವಲಂಬಿಸಿ ಪ್ರತಿ ಬಾಟಲಿಗೆ ಸರಾಸರಿ 10ರಿಂದ 20 ರು. ಏರಿಕೆ ಆಗಬಹುದೆಂದು ಅಂದಾಜಿಸಲಾಗಿದೆ. ಆಲ್ಕೋ ಹಾಲ್ ಪ್ರಮಾಣ ಹೆಚ್ಚಿರುವ ಬ್ಯಾಂಡ್ ಗಳ ಬಿಯರ್ ಬೆಲೆ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಅಬಕಾರಿ ಇಲಾಖೆ ಮೂಲಗಳು ತಿಳಿಸಿದೆ.