HomeKarnatakaಮದ್ಯಪ್ರಿಯರಿಗೆ ಬಿಗ್ ಶಾಕ್: ಬಜೆಟ್ ಬಳಿಕ ಮದ್ಯದ ಬೆಲೆ ಏರಿಕೆ ಸಾಧ್ಯತೆ

ಮದ್ಯಪ್ರಿಯರಿಗೆ ಬಿಗ್ ಶಾಕ್: ಬಜೆಟ್ ಬಳಿಕ ಮದ್ಯದ ಬೆಲೆ ಏರಿಕೆ ಸಾಧ್ಯತೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ತೀವ್ರ ಕಸರತ್ತು ನಡೆಸಿರುವ ರಾಜ್ಯ ಸರ್ಕಾರ ಅಬಕಾರಿ ಇಲಾಖೆ ಆದಾಯ ಸಂಗ್ರಹಣೆ ಗುರಿಯನ್ನು ಶೇ. 10ರಷ್ಟು ಹೆಚ್ಚಿಸಲು ಮುಂದಾಗಿದ್ದು, ಬಜೆಟ್ ನಂತರ ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ತಟ್ಟಲಿದೆ ಎಂದು ಹೇಳಲಾಗಿದೆ.

ಪಂಚ ಉಚಿತ ಗ್ಯಾರಂಟಿಗಳಿಗೆ ವಾರ್ಷಿಕ ಸುಮಾರು 59 ಸಾವಿರ ಕೋಟಿ ರೂ. ಖರ್ಚಾಗುತ್ತಿದ್ದು, ಸರ್ಕಾರಕ್ಕೆ ದೊಡ್ಡ ಆರ್ಥಿಕ ಹೊರೆಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಕಂದಾಯ, ಅಬಕಾರಿ, ಸಾರಿಗೆ ಇಲಾಖೆಯನ್ನು ಅವಲಂಬಿಸಿದೆ. ಪ್ರಮುಖ ಆದಾಯ ಮೂಲವಾಗಿರುವ ಅಬಕಾರಿ ಇಲಾಖೆ ಪ್ರತಿ ವರ್ಷ ಮದ್ಯದ ದರ ಪರಿಷ್ಕರಿಸಿ ಸರ್ಕಾರ ಖಜಾನೆ ಭರ್ತಿ ಮಾಡಿಕೊಳ್ಳುತ್ತಿದೆ.

ಬಡವರು, ಮಧ್ಯಮ ವರ್ಗದವರು ಹೆಚ್ಚಾಗಿ ಸೇವಿಸುವ ಅಗ್ಗದ ಮದ್ಯದ ಬೆಲೆ ಏರಿಕೆಯಾಗಿದ್ದು, ದರ ಹೆಚ್ಚಳದಿಂದ ಮದ್ಯದ ವಹಿವಾಟು ಕುಸಿದು ಉದ್ಯಮ ಸಂಕಷ್ಟದಲ್ಲಿದೆ. 2025 -26 ನೇ ಸಾಲಿನ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ 40,000 ಕೋಟಿ ರೂ. ಆದಾಯ ಸಂಗ್ರಹ ಗುರಿ ನೀಡಲಾಗಿತ್ತು. ನಂತರ ಇದನ್ನು ಪರಿಷ್ಕರಿಸಿ 3 ಸಾವಿರ ಕೋಟಿ ರೂ. ಹೆಚ್ಚುವರಿ ಗುರಿ ನೀಡಲಾಗಿತ್ತು. ಆದರೆ ಇದುವರೆಗೆ ಅಬಕಾರಿ ಇಲಾಖೆ ಶೇಕಡ 77.61 ರಷ್ಟು ಆದಾಯ ಸಂಗ್ರಹ ಗುರಿ ಸಾಧಿಸಿದ್ದು, ನಿರೀಕ್ಷಿತ ಆದಾಯ ಬಂದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮದ್ಯದ ಮೇಲಿನ ಎಇಡಿಯನ್ನು ಆರು ಬಾರಿ ಹೆಚ್ಚಳ ಮಾಡಿದೆ. ಮೂಲ ಅಬಕಾರಿ ಸುಂಕ ಪರಿಷ್ಕರಿಸಲಾಗಿದೆ. ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ಶ್ರೇಣೀಕೃತ ವ್ಯವಸ್ಥೆ ಪರಿಚಯಿಸಲಾಗಿದೆ.

ಬಜೆಟ್ ನಲ್ಲಿ ಮದ್ಯದ ದರ ಏರಿಕೆ ಮಾಡಿದರೆ ವಿರೋಧ ವ್ಯಕ್ತವಾಗಬಹುದು ಎನ್ನುವ ಕಾರಣಕ್ಕೆ ಬಜೆಟ್ ಅಧಿವೇಶನದ ನಂತರ ಮದ್ಯದ ದರ ಏರಿಕೆ ಮಾಡಲಾಗುವುದು. ಬಜೆಟ್ ನಲ್ಲಿ ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಗೆ ಹೆಚ್ಚುವರಿ ಆದಾಯ ಸಂಗ್ರಹ ಗುರಿ ಮಾತ್ರ ನಿಗದಿಪಡಿಸಲಿದ್ದಾರೆ. ನಂತರದಲ್ಲಿ ಮದ್ಯದ ಬೆಲೆ ಏರಿಕೆ ಮಾಡಬಹುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular