ದಾವಣಗೆರೆ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ದಾವಣಗೆರೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್ಟಿಎಸ್ಸಿ- 1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ 35,000ರೂ. ದಂಡ ವಿಧಿಸಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಜಿ. ಕಡದಕಟ್ಟೆ ಗ್ರಾಮದ ಎನ್. ಚಂದ್ರಪ್ಪ(25) ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ನ್ಯಾಮತಿ ತಾಲೂಕಿನ ಗ್ರಾಮವೊಂದರ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಬಾಲಕಿ ಗರ್ಭಿಣಿಯಾಗಲು ಕಾರಣನಾಗಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿ ಬಾಲಕಿಯನ್ನು ಪೋಷಕರಿಗೆ ಒಪ್ಪಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
