ಬೆಂಗಳೂರು : ಸಿನಿಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿನಿಮಾ ಟಿಕೆಟ್ ದರ 200 ರೂ.ನಿಗಧಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಂತರ ತಡೆ ನೀಡಿದೆ. ಟಿಕೆಟ್ ದರ 200 ರೂ.ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಮಲ್ಟಿಫ್ಲೆಕ್ಸ್ ಗಳಲ್ಲಿ ದರ ಮಿತಿ ಆದೇಶಕ್ಕೆ ಹೈಕೋ್ರ್ಟ್ ಇದೀಗ ತಡೆಯಾಜ್ಞೆ ನೀಡಿದೆ. ನ್ಯಾ.ರವಿ ಹೊಸಮನಿ ಅವರಿದ್ದ ಪೀಠ ಆದೇಶ ಹೊರಡಿಸಿದೆ.
200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು.ಮುಂದಿನ ತಿಂಗಳು ( ಅ.2) ರಂದು ಬಹು ನಿರೀಕ್ಷಿತ ಕಾಂತಾರ ಚಾಪ್ಟರ್ 1 ತೆರೆಗೆ ಬರಲಿದೆ. ಸಿನಿಮಾ ಬಿಡುಗಡೆಗೆ ಮುನ್ನ ಈ ಬೆಳವಣಿಗೆ ನಡೆದಿದೆ. ಸಿನಿಮಾ ಟಿಕೆಟ್ ಕಲೆಕ್ಷನ್ ಕಡಿಮೆ ಆಗುವ ಸಾಧ್ಯತೆಯಿದ್ದು, ಇದರಿಂದ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. 200 ರೂ. ಸಿನಿಮಾ ಟಿಕೆಟ್ ದರ ನಿಗದಿ ಪ್ರಶ್ನಿಸಿ ಮಲ್ಟಿಫ್ಲೆಕ್ಸ್ ಒಕ್ಕೂಟ ಹೈಕೋರ್ಟ್ ಮೊರೆ ಹೋಗಿತ್ತು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.ಅಕ್ಟೋಬರ್ 1 ರಂದು ಕಾಂತಾರ ಚಾಪ್ಟರ್ 1 ರಿಲೀಸ್ ಆಗಲಿದೆ. ಅದೇ ರೀತಿ ಡಿಸೆಂಬರ್ ತಿಂಗಳಿನಲ್ಲಿ ಸುದೀಪ್ ನಟನೆಯ ಮಾರ್ಕ್ ಸಿನಿಮಾ ಹಾಗೂ ಅದೇ ರೀತಿ ನಟ ದರ್ಶನ್ ನಟನೆಯ ಡೆವಿಲ್ ಸಿನಿಮಾ ಕೂಡ ರಿಲೀಸ್ ಆಗಲಿದೆ.