HomeLatest Newsಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್: ಖಾಸಗಿ ಶಾಲೆಗಳ ಶುಲ್ಕ ಶೇ. 15-20ರಷ್ಟು ಹೆಚ್ಚಳ

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್: ಖಾಸಗಿ ಶಾಲೆಗಳ ಶುಲ್ಕ ಶೇ. 15-20ರಷ್ಟು ಹೆಚ್ಚಳ

ಬೆಂಗಳೂರು: ಬಹುತೇಕ ಖಾಸಗಿ ಶಾಲೆಗಳಲ್ಲಿ 2025-26ರ ಶೈಕ್ಷಣಿಕ ಸಾಲಿಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಲಾಗಿದೆ.

ಅನೇಕ ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 15 ರಿಂದ 20 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಪೋಷಕರಿಗೆ ಹೆಚ್ಚಿನ ಶುಲ್ಕದ ಹೊರೆ ಬಿದ್ದಿದೆ. ಪ್ರತಿವರ್ಷ ಶಾಲೆಗಳಲ್ಲಿ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ, ಡೀಸೆಲ್ ಬೆಲೆ ಏರಿಕೆ ಮೊದಲಾದ ಕಾರಣಗಳಿಂದ ಪ್ರವೇಶ ಶುಲ್ಕದಲ್ಲಿ 15 ರಿಂದ 20 ರಷ್ಟು ಹೆಚ್ಚಳ ಮಾಡುವುದಾಗಿ ಖಾಸಗಿ ಶಾಲೆಗಳು ಹೇಳುತ್ತಿವೆ.

 ರಾಜ್ಯ ಸರ್ಕಾರ ಡೀಸೆಲ್ ಬೆಲೆ ಹೆಚ್ಚಿಸಿದೆ. ವಾಹನಗಳ ವಿಮಾ ಮೊತ್ತ ಹೆಚ್ಚಾಗಿದೆ. ಶಿಕ್ಷಣ ಸಂಸ್ಥೆಗಳಿಗೂ ಕಸದ ತೆರಿಗೆ ಹಾಕಲಾಗುತ್ತಿದ್ದು, ನೀರಿನ ದರ ಹೆಚ್ಚಳ ಮಾಡಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಿಗೆ ವಾಣಿಜ್ಯ ಉದ್ಯಮಗಳಿಗೆ ಇರುವ ದರದಲ್ಲಿ ತೆರಿಗೆ ವಸೂಲಿ ಮಾಡುತ್ತಿದ್ದು, ಶಾಲೆಗಳ ನಿರ್ವಹಣೆ, ಸಿಬ್ಬಂದಿ, ಶಿಕ್ಷಕರು, ಚಾಲಕರ ವೇತನ ಹೆಚ್ಚಳ ಕಾರಣದಿಂದ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು ಹೇಳಿದ್ದಾರೆ. ಖಾಸಗಿ ಶಾಲೆಗಳಲ್ಲಿ ಶುಲ್ಕ ಹೆಚ್ಚಳ ಮಾಡಿರುವುದರಿಂದ ಪೋಷಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಲವು ಕಡೆ ಪ್ರತಿಭಟನೆ ಕೂಡ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular