HomeKarnatakaBREAKING : ಪವಿತ್ರಾಗೌಡಗೆ ಬಿಗ್ ಶಾಕ್ : 'ಮಧ್ಯಂತರ ಜಾಮೀನು' ನೀಡಲು ಕೋರ್ಟ್ ನಕಾರ.!

BREAKING : ಪವಿತ್ರಾಗೌಡಗೆ ಬಿಗ್ ಶಾಕ್ : ‘ಮಧ್ಯಂತರ ಜಾಮೀನು’ ನೀಡಲು ಕೋರ್ಟ್ ನಕಾರ.!


ಬೆಂಗಳೂರಿನ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಅವರಿಗೆ ನ್ಯಾಯಾಲಯದಿಂದ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮ ಮಗಳ ವಿದ್ಯಾಭ್ಯಾಸದ ಕಾರಣ ನೀಡಿ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು (Interim Bail) ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ (57ನೇ CCH ಕೋರ್ಟ್) ವಜಾಗೊಳಿಸಿದೆ.

ಹೌದು, ಪವಿತ್ರಾಗೌಡ ಅವರು ತಮ್ಮ ಮಗಳ ಪರೀಕ್ಷೆ ಇರುವ ಕಾರಣ ಕೆಲವು ದಿನಗಳ ಕಾಲ ಮಧ್ಯಂತರ ಜಾಮೀನು ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿದ ನ್ಯಾಯಾಧೀಶರು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ.ಪ್ರಾಸಿಕ್ಯೂಷನ್ ಪರ ವಕೀಲರು ಈ ಅರ್ಜಿಯನ್ನು ಬಲವಾಗಿ ವಿರೋಧಿಸಿದ್ದರು. ಪ್ರಕರಣದ ತನಿಖೆ ಮತ್ತು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುವುದರಿಂದ ಜಾಮೀನು ನೀಡಬಾರದು ಎಂದು ವಾದಿಸಿದ್ದರು.

ಹಿಂದಿನ ಹಿನ್ನಡೆ: ಈ ಹಿಂದೆ ಕೂಡ ಸೆಷನ್ಸ್ ನ್ಯಾಯಾಲಯ ಮತ್ತು ಸುಪ್ರೀಂ ಕೋರ್ಟ್ನಲ್ಲಿ ಪವಿತ್ರಾಗೌಡ ಅವರ ನಿಯಮಿತ ಜಾಮೀನು ಅರ್ಜಿಗಳು ವಜಾಗೊಂಡಿದ್ದವು. ಸುಪ್ರೀಂ ಕೋರ್ಟ್ ಇವರ ಜಾಮೀನನ್ನು ರದ್ದುಗೊಳಿಸಿದ ನಂತರ ಇವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ಹಿನ್ನೆಲೆ
ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರನ್ನು ಅಪಹರಿಸಿ ಬೆಂಗಳೂರಿನಲ್ಲಿ ಭೀಕರವಾಗಿ ಹತ್ಯೆ ಮಾಡಿದ ಆರೋಪದಡಿ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಪವಿತ್ರಾಗೌಡ ಅವರನ್ನು ಪ್ರಮುಖ ಪ್ರಚೋದಕಿ ಮತ್ತು ಆರೋಪಿ ನಂಬರ್ 1 (A1) ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular