HomeLatest NewsBIG NEWS : ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಬಿಗ್ ಶಾಕ್ : 6...

BIG NEWS : ಹೊಸ ವರ್ಷಕ್ಕೆ ಸಾರಿಗೆ ನೌಕರರಿಗೆ ಬಿಗ್ ಶಾಕ್ : 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಬಿಗ್ ಶಾಕ್ ನೀಡಿದೆ.ಮುಷ್ಕರ ನಡೆಸದಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಹೌದು,   ಪ್ರತಿಭಟನೆಗೆ ಸಜ್ಜಾಗಿದ್ದ ಸಾರಿಗೆ ನೌಕರರಿಗೆ ಸರ್ಕಾರ ‘ಎಸ್ಮಾ’ ಅಸ್ತ್ರ ಪ್ರಯೋಗಿಸಿ ಭಾರಿ ಶಾಕ್ ನೀಡಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ 6 ತಿಂಗಳವರೆಗೆ ಯಾವುದೇ ಮುಷ್ಕರ ನಡೆಸದಂತೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದ್ದು, ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ.

2026 ರ ಜನವರಿ 1 ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ನಡೆಸದಂತೆ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025 ರ ಡಿ.31 ಕ್ಕೆ ಕೊನೆಯಾದ ಹಿನ್ನೆಲೆ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಎಸ್ಮಾ ಜಾರಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಮುಂದಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular