ಬೆಂಗಳೂರು : ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿನಲ್ಲಿ 1 ದಿನ ಋತುಚಕ್ರ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಇದೀಗ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಖಾಸಗಿ ವಲಯದಲ್ಲಿ ಋತುಚಕ್ರ ರಜೆ ಘೋಷಣೆಗೆ ವಿರೋಧ ವ್ಯಕ್ತವಾಗಿತ್ತು. ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಹೋಟೆಲ್ ಮಾಲೀಕರ ಸಂಘದ ಪರವಾಗಿ ವಕೀಲರಾದ ಪ್ರಶಾಂತ್ ಬಿ.ಕೆ. ವಾದ ಮಂಡನೆ ಮಂಡಿಸಿದ್ರು. ಇದೀಗ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಸರ್ಕಾರ ಮಂಜೂರು ಮಾಡಿತ್ತು.
ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಆದೇಶ ಹೊರಡಿಸಿತ್ತು.
