BIG NEWS : ರಾಜ್ಯದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ : 16 ಸಾವಿರ ನೌಕರರ ಖಾಯಂ ಇಲ್ಲವೆಂದ ಸರ್ಕಾರ !

ಬೆಂಗಳೂರು : ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, 16 ಸಾವಿರ ನೌಕರರ ಖಾಯಂ ಇಲ್ಲವೆಂದು ಸರ್ಕಾರ ಹೇಳಿದೆ.

ಹೌದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಣೆ ಮಾಡಿದ್ದು, ಅತಿಥಿ ಉಪನ್ಯಾಸಕರ ಕಾಯಂ ಇಲ್ಲ ಎಂದು ಹೇಳಿದೆ.

ರಾಜ್ಯದಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪ ಮಾಡಿದರು. ಖಾಲಿ ಹುದ್ದೆಗೆ ಕಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂಬುದಾಗಿ ಸದನಕ್ಕೆ ಉನ್ನತ ಶಿಕ್ಷಣ ಸಚಿವ ಸುಧಾಕರ್ ಉತ್ತರ ನೀಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದವರೆಗೂ ವೇತನ ನೀಡಲಾಗುತ್ತಿದೆ, ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read