ಬೆಂಗಳೂರು : ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಗ್ ಶಾಕ್ ಎದುರಾಗಿದ್ದು, ಕಠಿಣ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ ಸಲಹೆ ಸೂಚನೆಗಳನ್ನು ನೀಡಿದರು.
ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು. • ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ ನಡೆಸಿ, ಕ್ರಮ ವಹಿಸಬೇಕು. ಗ್ಯಾರಂಟಿ ಯೋಜನೆಗಳ ಲಾಭ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದರು.
ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55 ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ ₹544 ಕೋಟಿ ಉಚಿತ ಟಿಕೆಟ್ ಪ್ರಯಾಣಿಕರಿಗೆ ರೂ.13,903 ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02 ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ. • ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು. • ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು. • ಐಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದೆ.
— Siddaramaiah (@siddaramaiah) September 8, 2025
ಸಭೆಯ ಮುಖ್ಯಾಂಶಗಳು ಹೀಗಿವೆ;
• ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ,… pic.twitter.com/9YoFD1EgiD