HomeLatest Newsಅಪ್ರಾಪ್ತ ಯುವಕನ ಮದುವೆ ಮಾಡಿದವರಿಗೆ ಬಿಗ್ ಶಾಕ್: ಬಾಲ್ಯವಿವಾಹಕ್ಕೆ ಬೆಂಬಲದಡಿ ಕೇಸ್ ದಾಖಲು

ಅಪ್ರಾಪ್ತ ಯುವಕನ ಮದುವೆ ಮಾಡಿದವರಿಗೆ ಬಿಗ್ ಶಾಕ್: ಬಾಲ್ಯವಿವಾಹಕ್ಕೆ ಬೆಂಬಲದಡಿ ಕೇಸ್ ದಾಖಲು

ಕೊಪ್ಪಳ: ಗಂಗಾವತಿ ನಗರ ವ್ಯಾಪ್ತಿಯಲ್ಲಿ 2024 ರ ಸೆಪ್ಟೆಂಬರ್ 17 ರಂದು ಅಪ್ರಾಪ್ತ ಯುವಕನಿಗೆ ಮದುವೆ ಮಾಡಿರುವ ಕುರಿತು ದೂರು ಬಂದ ಹಿನ್ನೆಲೆಯಲ್ಲಿ, ಪರಿಶೀಲನೆ ನಂತರ ಇದನ್ನು ಬಾಲ್ಯ ವಿವಾಹವೆಂದು ಪರಿಗಣಿಸಿ, ಬಾಲ್ಯವಿವಾಹಕ್ಕೆ ಬೆಂಬಲ, ಪ್ರೋತ್ಸಾಹ ನೀಡಿದವರು, ಸಹಕರಿಸಿದವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ಸಂಖ್ಯೆ: 0187/2025 ರಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಡಿಯಲ್ಲಿ ಮಕ್ಕಳ ಸಹಾಯವಾಣಿಯ ಸಂಯೋಜಕರ ಮೂಲಕ ಸೆಪ್ಟೆಂಬರ್ 15 ರಂದು ದೂರು ದಾಖಲಿಸಲಾಗಿದೆ.

ಗಂಗಾವತಿ ನಗರ ವ್ಯಾಪ್ತಿಯಲ್ಲಿ 2024 ರ ಸೆಪ್ಟೆಂಬರ್ 17 ರಂದು ಅಪ್ರಾಪ್ತ ಯುವಕನಿಗೆ ವಿವಾಹ ಮಾಡಿದ್ದು, ವಿವಾಹವನ್ನು ಗಂಗಾವತಿ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ನೋಂದಾಯಿಸಿ, ವಿವಾಹ ನೋಂದಣಿ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ.

ಆದರೆ ವಿವಾಹದ ಸಂದರ್ಭದಲ್ಲಿ ಯುವಕನಿಗೆ 20 ವರ್ಷ, 6 ತಿಂಗಳು ಏಳು ದಿನಗಳು ಆಗಿದ್ದು, ಅಪ್ರಾಪ್ತ ವಯಸ್ಸಿನ ಯುವಕನಿಗೆ ವಿವಾಹವನ್ನು ಮಾಡಿರುತ್ತಾರೆ. ಈ ವಿವಾಹ ಮಾಡಿದವರ ವಿರುದ್ಧ ಕಾನೂನು ರೀತ್ಯ ಕ್ರಮ ಜರುಗಿದುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಅವರಿಗೆ ಮಾಹಿತಿ ನೀಡಲಾಗಿತ್ತು. ಆಯೋಗದ ಸದಸ್ಯರು ಈ ಬಗ್ಗೆ ವಿಚಾರಣೆ ನಡೆಸುವಂತೆ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯೋಗದ ನಿರ್ದೇಶನದನ್ವಯ ವಿವಾಹ ನೋಂದಣಿ ಅರ್ಜಿ ಮತ್ತು ಸಲ್ಲಿಸಿದ ದಾಖಲಾತಿಗಳನ್ನು ಮತ್ತು ಶಾಲಾ ದಾಖಲಾತಿಗಳನ್ನು ಪರಿಶೀಲಿಸಲಾಗಿ ವಿವಾಹ ಸಂದರ್ಭದಲ್ಲಿ ಯುವಕನು ಅಪ್ರಾಪ್ತ ವಯಸ್ಕನೆಂದು ಕಂಡುಬಂದಿರುತ್ತದೆ. ಆದ್ದರಿಂದ ಬಾಲ್ಯವಿವಾಹಕ್ಕೆ ಬೆಂಬಲ, ಪ್ರೋತ್ಸಾಹ ನೀಡಿದವರು, ಸಹಕರಿಸಿದವರ ವಿರುದ್ಧ ಗಂಗಾವತಿ ನಗರ ಠಾಣೆಯಲ್ಲಿ ಮಕ್ಕಳ ಸಹಾಯವಾಣಿಯ ಸಂಯೋಜಕರ ಮೂಲಕ ಪ್ರಕರಣ ದಾಖಲಿಸಲಾಗಿದೆ.

ಆದ್ದರಿಂದ ಅಪ್ರಾಪ್ತ ವಯಸ್ಸಿನವರಿಗೆ ವಿವಾಹ ಮಾಡಿದವರಿಗೆ, ಭಾಗವಹಿಸಿದವರಿಗೆ, ನೆರವೇರಿಸಿದವರಿಗೆ ಹಾಗೂ ಪ್ರೋತ್ಸಾಹಿಸಿದವರಿಗೆ ಕನಿಷ್ಟ 1 ರಿಂದ 2 ವರ್ಷಗಳ ಜೈಲು ಶಿಕ್ಷೆ ಮತ್ತು ರೂ.1 ಲಕ್ಷ ರೂಪಾಯಿ ದಂಡವನ್ನು ವಿಧಿಸಬಹುದಾಗಿದ್ದು, ಬಾಲ್ಯವಿವಾಹವನ್ನು ಮಾಡಿ ಶಿಕ್ಷೆಗೆ ಗುರಿಯಾಗಬೇಡಿ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular