ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರ್.ಎಸ್.ಎಸ್.)ಗೆ 100 ವರ್ಷ ತುಂಬಿದ ಬೆನ್ನಲ್ಲೇ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳಿಗೆ ಸರ್ಕಾರ ಬ್ರೇಕ್ ಹಾಕಲಿದೆ.
ಆರ್.ಎಸ್.ಎಸ್. ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ಬಗ್ಗೆ ಗಂಭೀರ ಚಿಂತನೆ ನಡೆದಿದೆ. ಸಾರ್ವಜನಿಕ, ಸರ್ಕಾರಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆಗೆ ಬ್ರೇಕ್ ಹಾಕಲಾಗುವುದು.
ರಾಜ್ಯದಲ್ಲಿ ಆರ್.ಎಸ್.ಎಸ್. ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಿಎಂಗೆ ಕೆಲವು ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಶಾಲಾ-ಕಾಲೇಜುಗಳ ಆವರಣ, ಉದ್ಯಾನವನ, ಸರ್ಕಾರಿ ಮೈದಾನ, ಹಾಸ್ಟೆಲ್ ಕ್ಯಾಂಪಸ್ ಗಳಲ್ಲಿ ಆರ್.ಎಸ್.ಎಸ್. ಚಟುವಟಿಕೆ ನಿರ್ಬಂಧಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ.
ಆರ್ ಎಸ್.ಎಸ್. ಚಟುವಟಿಕೆಗೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸಿದೆ. ಕಾನೂನಾತ್ಮಕವಾಗಿ ಆರ್.ಎಸ್.ಎಸ್. ನಿಷೇಧಿಸಲು ಸಾಧ್ಯವಿಲ್ಲವೆಂಬುದು ಅರಿತಿದೆ. ಹೀಗಾಗಿ ಆರ್.ಎಸ್.ಎಸ್. ಚಟುವಟಿಕೆ ನಿರ್ಬಂಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಈ ಕುರಿತಾಗಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.