`ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ ಬಿಗ್ ಶಾಕ್ : 29 ಲಕ್ಷ ಕುಟುಂಬಗಳಿಗೆ ಇನ್ನೂ ವರ್ಗಾವಣೆಯಾಗಿಲ್ಲ 5 ಕೆಜಿ ಅಕ್ಕಿ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕ್ ನೀಡಿದ್ದು, ಯೋಜನೆಯ ಸುಮಾರು 29 ಲಕ್ಷ ಫಲಾನುಭವಿ ಕುಟುಂಬಗಳಿಗೆ ನೇರ ನಗದು ವರ್ಗಾವಣೆ ಮಾಡಿಲ್ಲ.

ಹೌದು, ಪಡಿತರ ಚೀಟಿಯಲ್ಲಿ ವಿವಿಧ ತಾಂತ್ರಿಕ ಕಾರಣದ ಹಿನ್ನೆಲೆಯಲ್ಲಿ ಯೋಜನೆಯ ಅರ್ಹ ಫಲಾನುಭವಿಗಳ ಕುಟುಂಬಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವ ಯೋಜನೆಗೆ ಬ್ರೇಕ್ ಹಾಕಿದೆ. ಅನ್ನಭಾಗ್ಯ ಫಲಾನುಭವಿ ಕುಟುಂಬದ ಪ್ರತಿ ಸದಸ್ಯರಿಗೆ ತಿಂಗಳಿಗೆ ತಲಾ 10 ಕೆಜಿ ಅಕ್ಕಿ ವಿತರಿಸುವುದಾಗಿ ಘೋಷಿಸಿತ್ತು. ಆದರೆ ಹೆಚ್ಚುವರಿ ಅಕ್ಕಿ ಸಿಗದ ಕಾರಣ 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿ ಬದಲಿಗೆ 170 ರೂ. ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವುದಾಗಿ ಹೇಳಿತ್ತು.

ಆದರೆ ಇದೀತ ತಾಂತ್ರಿಕ ಕಾರಣ ರಾಜ್ಯದ 29 ಲಕ್ಷಕ್ಕೂ ಹೆಚ್ಚು ಅನ್ನಭಾಗ್ಯ ಯೋಜನೆ ಫಲಾನುಭವಿ ಕುಟುಂಬಗಳಿಗೆ 5 ಕೆಜಿ ಅಕ್ಕಿ ಬದಲಿಗೆ ನೀಡುವ ಹಣ ವರ್ಗಾವಣೆಗೆ ಬ್ರೇಕ್ ಹಾಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read