ಪ್ರಯಾಣಿಕರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು : ಟ್ಯಾಕ್ಸಿ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ರಾಜ್ಯಾದ್ಯಂತ ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ ಮಾಡಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

ಸಾರಿಗೆ ಇಲಾಖೆಯು ರಾಜ್ಯಾದ್ಯಂತ ಏಕರೂಪ ದರ ನಿಗದಿ ಪಡಿಸಿದ್ದು, ಒಂದೇ ಮಾದರಿ ಪ್ರಯಾಣ ದರದ ಅನುಸಾರ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ಯಾಕ್ಸಿ ಪ್ರಯಾಣದ ದರ ಮೊದಲ 4 ಕಿ.ಮೀ.ಗಳಿಗೆ ವಾಹನಗಳ ಬೆಲೆಯ ಆಧಾರದಲ್ಲಿ 100 ರೂ. 115 ರೂ. ಮತ್ತು 130 ರೂ. ಎಂದು ವರ್ಗಗಳಲ್ಲಿ ನಿಗದಿಪಡಿಸಲಾಗಿದೆ.

ಟ್ಯಾಕ್ಸಿಗೆ ಹೊಸ ದರ ನಿಗದಿ ಹೀಗಿದೆ

1) 10 ಲಕ್ಷ ರೂ.ಗಿಂತ ಕಡಿಮೆ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 100 ರೂ. ನಿಗದಿ

2) 4 ಕಿಮೀ ನಂತರ ಪ್ರತಿ ಕಿಮೀಗೆ ಹೆಚ್ಚುವರಿ 24 ರೂ.ನಿಗದಿ

3) 10 ಲಕ್ಷದಿಂದ 15 ಲಕ್ಷ ರೂ.ವರೆಗಿನ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 115 ರೂ. ನಿಗದಿ

4) 4 ಕಿಮೀ ನಂತರ ಪ್ರತಿ 1 ಕಿಮೀಗೆ ಹೆಚ್ಚುವರಿ 28 ರೂ. ನಿಗದಿ

5)15 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ವಾಹನಗಳಿಗೆ 4 ಕಿಮೀ ವರೆಗೆ ಕನಿಷ್ಠ 130 ರೂ. ನಿಗದಿ

6) 4 ಕಿಮೀ ನಂತರ ಪ್ರತಿ ಕಿಲೋ ಮೀಟರ್‌ಗೆ ಹೆಚ್ಚುವರಿ 32 ರೂ. ನಿಗದಿ

ಹೊಸ ನಿಯಮಗಳೇನು?

1) ವೈಯಕ್ತಿಕ ಲಗೇಜುಗಳಿಗೆ 120 ಕೆಜಿ ವರೆಗೆ ವಿನಾಯಿತಿ

2) ಮೊದಲ 5 ನಿಮಿಷ ಕಾಯುವಿಕೆಗೆ ಶುಲ್ಕ ಇಲ್ಲ

3) ಪ್ರಯಾಣಿಕರಿಂದ ಜಿಎಸ್‌ಟಿ, ಟೋಲ್‌ ವಸೂಲಿಗೆ ಅವಕಾಶ

4) ಬೆಳಗ್ಗಿನ ಜಾವ 6 ಗಂಟೆ ವರೆಗೆ ಸಂಚರಿಸುವ ಟ್ಯಾಕ್ಸಿಗಳಿಗೆ 10% ಹೆಚ್ಚುವರಿ ದರ ವಿಧಿಸಲು ಅವಕಾಶ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read