ಬೆಂಗಳೂರು : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು( Lokayukta Raid) ದಾಳಿ ನಡೆಸಿದ್ದಾರೆ.
ಕೊಪ್ಪಳ, ಧಾರವಾಡ, ವಿಜಯನಗರ, ಬಳ್ಳಾರಿ, ಬೆಂಗಳೂರು, ಶಿವಮೊಗ್ಗ ಸೇರಿ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ.
ವಿಜಯನಗರ ಡಿಹೆಚ್ ಒ ಕಚೇರಿ , ಆಸ್ಪತ್ರೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.ಧಾರವಾಡದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ್ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಧಾರವಾಡದ ಸಿಲ್ವರ್ ಆರ್ಚೆಡ್ ಬಡಾವಣೆಯಲ್ಲಿರುವ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ರಾಜಶೇಖರ್ ಬೆಳಗಾವಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ರಾಣಿ ಚೆನ್ನಮ್ಮ ನಗರದಲ್ಲಿರುವ ರಾಜಶೇಖರ್ ಗೆ ಸೇರಿದ ಖಾಸಗಿ ಕಚೇರಿ, ಯರಿಕೊಪ್ಪ ಗ್ರಾಮದ ಬಳಿ ಫಾರ್ಮ್ ಹೌಸ್ ಮೇಲೂ ದಾಳಿ ನಡೆಸಲಾಗಿದೆ.

