ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಕಲಬುರಗಿ, ಯಾದಗಿರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಕಲಬುರಗಿಯ ಅಕ್ಕಮಹಾದೇವಿ ಬಡಾವಣೆಯಲ್ಲಿ ತಹಶೀಲ್ದಾರ್ ಮನೆ ಹಾಗೂ ಯಾದಗಿರಿ ಜಿಲ್ಲೆಯ ಲೋಕಾಯುಕ್ತ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ತುಮಕೂರಿನಲ್ಲಿ ನಿರ್ಮಿತ ಕೇಂದ್ರದ ಎಂಡಿ ರಾಜಶೇಖರ್ ಹಾಗೂ ಸಹೋದರರ ಮನೆ ಮೇಲೆ ದಾಳಿ ನಡೆದಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಕಡೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
You Might Also Like
TAGGED:ಲೋಕಾಯುಕ್ತ ಅಧಿಕಾರಿಗಳ ದಾಳಿ