ಬೆಂಗಳೂರು : ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರೆದಿದ್ದು, ಇಂದು ಬೆಳ್ಳಂಬೆಳಿಗ್ಗೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಮತ್ತು ಲಂಚದ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಕರ್ನಾಟಕದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ತೀವ್ರಗೊಳಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಲಂಚ ಸ್ವೀಕಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (Disproportionate Assets) ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಮಿಂಚಿನ ಕಾರ್ಯಾಚರಣೆ ನಡೆದಿದೆ.
ಬಾಗಲಕೋಟೆ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.ಬೆಂಗಳೂರು, ಮೈಸೂರು, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈ ದಾಳಿ ನಡೆದಿದೆ.
ಬಾಗಲಕೋಟೆ ಮತ್ತು ಮೈಸೂರು ಮಾತ್ರವಲ್ಲದೆ, ರಾಜ್ಯದ ಇತರ ಭಾಗಗಳಲ್ಲೂ ಲೋಕಾಯುಕ್ತರು ಬಲೆ ಬೀಸಿದ್ದಾರೆ. ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ಹಲವು ತಂಡಗಳು ಈ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ದಾಳಿ ಮುಕ್ತಾಯದ ನಂತರ ಸಂಪೂರ್ಣ ಮಾಹಿತಿ ಹೊರಬರಲಿದೆ. ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅಧಿಕಾರಿಗಳ ಬೆನಾಮಿ ಆಸ್ತಿ ಮತ್ತು ಅಕ್ರಮ ಹೂಡಿಕೆಗಳ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

