ರೈತ ಸಮುದಾಯಕ್ಕೆ `ಬಿಗ್ ಶಾಕ್’ : ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸೇರಿ ಉಚಿತ ಮೂಲ ಸೌಕರ್ಯ ಯೋಜನೆ ರದ್ದು

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಶಾಕ್ ಕೊಟ್ಟಿದ್ದು,ಕೃಷಿ ಪಂಪ್ ಸೆಟ್ ಗಳಿಗೆ ಟ್ರಾನ್ಸ್ ಫಾರ್ಮರ್ ಸಮೇತ ಉಚಿತವಾಗಿ ಮೂಲ ಸೌಕರ್ಯ ಒದಗಿಸುವ ಯೋಜನೆಗೆ ರಾಜ್ಯ ಸರ್ಕಾರ ಕೊಕ್ ಕೊಟ್ಟಿದೆ.

ರಾಜ್ಯ ಸರ್ಕಾರವು ಈ ಬಗ್ಗೆ ಆದೇಶ ಹೊರಡಿಸಿದ್ದು, ಕೃಷಿ ಕೊಳವೆ ಬಾವಿಗಳಿಗೆ ರೈತರು ಸ್ವಂತ ಖರ್ಚಿನಲ್ಲಿ ವಿದ್ಯುತ್ ಸಂಪರ್ಕ ಪಡೆಯಬೇಕೆಂದು ತಿಳಿಸಿದೆ. ಈ ಮೂಲಕ ಬರದ ನಡುವೆಯೇ ರೈತರಿಗೆ ಮತ್ತೊಂದು ಶಾಕ್ ಎದುರಾಗಿದೆ.

ರಾಜ್ಯ ಸರ್ಕಾರವು ಈ ಹಿಂದೆ ಅಕ್ರಮ ಸಕ್ರಮ ಮತ್ತು ಶೀಘ್ರ ವಿದ್ಯುತ್ ಯೋಜನೆಯಡಿ ರೈತರಿಂದ ಪ್ರತಿ ಕೊಳವೆ ಬಾವಿಗೆ ಶುಲ್ಕದ ರೂಪದಲ್ಲಿ 24 ಸಾವಿರ ರೂ. ಮಾತ್ರ ಕಟ್ಟಿಸಿಕೊಳ್ಳುತ್ತಿತ್ತು. ಆದರೆ ರಾಜ್ಯ ಸರ್ಕಾರ ಈ ಯೋಜನೆಯನ್ನು ರದ್ದು ಮಾಡಿದ್ದು, ಇನ್ಮುಂದೆ   ಹೊಸದಾಗಿ ಕೊಳವೆ ಬಾವಿ ಕೊರೆಸುವ ರೈತರು ವಿದ್ಯುತ್ ಸಂಪರ್ಕಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read