ಕರ್ನಾಟಕಕ್ಕೆ ಬಿಗ್ ಶಾಕ್ : ʻಮಹಾದಾಯಿ ಯೋಜನೆʼಗೆ ಅನುಮೋದನೆ ನಿರಾಕರಿಸಿದ ರಾಷ್ಟ್ರೀಯ ವನ್ಯಜೀವಿ ಮಂಡಳಿ!

 

ಬೆಂಗಳೂರು : ಕರ್ನಾಟಕಕ್ಕೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಬಿಗ್‌ ಶಾಕ್‌ ನೀಡಿದ್ದು, ಮಹದಾಯಿ ಕಳಸಾ ನಾಲಾ ತಿರುವ ಯೋಜನೆಗೆ ಅನುಮೋದನೆಗೆ ನಿರಾಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ,  ಹುಬ್ಬಳ್ಳಿ -ಧಾರವಾಡ ಸುತ್ತಮುತ್ತಲಿನ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಮಹದಾಯಿಯ ಕಳಸಾ ನಾಲಾ ತಿರುವು ಯೋಜನೆಗೆ ಮತ್ತೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆ ನಿರಾಕರಿಸಿದೆ. ಕೇಂದ್ರ ಅರಣ್ಣ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಮಹಾದಾಯಿ ಯೋಜನೆಗೆ ಅನುಮೋದನೆ ನೀಡದಿರಲು ನಿರ್ಧರಿಸಿದೆ. ಈ ಸಂದೇಶವನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್ ಶಹಾ ಅವರೇ? ಎಂದು ಪ್ರಶ್ನಿಸಿದ್ದಾರೆ.

ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರು ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್ ಶಹಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಹಾ ಅವರೇ, ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿರುವಿರಾ?.

ಬಡ ಕನ್ನಡಿಗರ ಹಸಿವು ನೀಗಿಸಲೆಂದೇ ನಾವು ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಗೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ಅಡ್ಡಗಾಲು ಹಾಕುತ್ತಲೇ ಬಂದಿರುವುದು ಇಡೀ ದೇಶಕ್ಕೆ ಗೊತ್ತಿದೆ. ಅನ್ನಭಾಗ್ಯ ಯೋಜನೆಯಡಿ ವಿತರಿಸಲು ಬೇಕಾಗಿರುವ ಅಕ್ಕಿಯನ್ನು  ಒಂದು ಕಿಲೋಗೆ 33 ರೂಪಾಯಿ ಕೊಟ್ಟು ಖರೀದಿಸುತ್ತೇವೆ ಎಂದು ಹೇಳಿದರೂ ಅಕ್ಕಿ ಕೊಡಲಿಲ್ಲ. ಈಗ ಅದೇ ಅಕ್ಕಿಯನ್ನು ‘’ಭಾರತ್ ಬ್ರಾಂಡ್’’ ಎಂಬ ಹೆಸರಿನಲ್ಲಿ  ಒಂದು ಕಿಲೋಗೆ ರೂ.29ರಂತೆ ಮಾರಾಟ ಮಾಡಲು ಹೊರಟಿದೆ ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read