ಬೆಂಗಳೂರು : ರಾಜ್ಯ ಸರ್ಕಾರವು ಜನತೆಗೆ ಮತ್ತೊಂದು ಶಾಕ್ ನೀಡಿದದು, ಮುದ್ರಾಂಕ ಶುಲ್ಕವನ್ನು ಐದು ಪಟ್ಟು ಹೆಚ್ಚಳ ಮಾಡಿ ರಾಜ್ಯ ಪತ್ರ ಪ್ರಕಟಿಸಿದೆ.
ವಿಭಜನೆ, ದತ್ತು ಪತ್ರ, ಅಫಿಡವಿಟ್, ಕರಾಋು ಪತ್ರದ ರದ್ಧತಿ, ಕಂಪನಿಗಳ ಪುನರ್ ನಿರ್ಮಾಣ, ಅಥವಾ ವಿಭಜನೆ, ಅಡಮಾನದ ಮರು ಹಂಚಿಕೆ ಸೇರಿದಂತೆ ಒಟ್ಟು ೨೫ ಕ್ಕೂ ಹೆಚ್ಚು ದಾಖಲೆಗಳ ಶುಲ್ಕ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ರಾಜ್ಯಪತ್ರ ಹೊರಡಿಸಿದೆ.
ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ, ಪ್ರಸ್ತುತ 500 ರೂ. ಬದಲಾಗಿ ಪ್ರತಿ ಷೇರಿಗೆ 3,000 ರೂ. ಮಾಡಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1,000 ರೂ.ಗೆ ಹೆಚ್ಚಿಸಲಾಗಿದೆ. ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯದಂತೆ ಆಗಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್ಗಳಿಗೆ ಮುಂದೆ 100 ರೂಪಾಯಿ ವರೆಗೆ ಮುದ್ರಾಂಕ ಶುಲ್ಕ ವಿಧಿಸಲಾಗುತ್ತದೆ.
ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ.ನಿಂದ 500 ರೂ.ಗೆ ಹೆಚ್ಚಿಸಲಾಗಿದೆ. ಐದಕ್ಕಿಂತ ಹೆಚ್ಚು ಮಂದಿ, ಆದರೆ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ 200 ರೂ.ನಿಂದ 1,000 ರೂ.ಗೆ ಹೆಚ್ಚಳ ಮಾಡಲಾಗಿದೆ.