ಧರ್ಮಸ್ಥಳ : ಧರ್ಮಸ್ಥಳದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹಲ್ಲೆಗೊಳಗಾದ ಮೂವರು ಯೂಟ್ಯೂಬರ್ ಗಳ ವಿರುದ್ಧವೂ ಎಫ್ ಐ ಆರ್ ದಾಖಲಾಗಿದೆ.
ಸ್ಥಳೀಯ ಹರೀಶ್ ನಾಯ್ಕ್ ನೀಡಿದ ದೂರಿನ ಮೇರೆಗೆ ಯೂಟ್ಯೂಬರ್ ಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಯೂಟ್ಯೂಬರ್ ಗಳು ಅಡ್ಡಗಟ್ಟಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಆರು ಮಂದಿ ಅರೆಸ್ಟ್
ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಪದ್ಮನಾಭ್ ಪ್ರಸಾದ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತ ಆರೋಪಿಗಳು. ಮೂವರು ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆಸಿದ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.
ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದರು. ಪೊಲೀಸ್ ಅಧಿಕಾರಿ ನೀಡಿದ್ದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.