HomeKarnatakaBIG NEWS : ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್'ಗೆ ಬಿಗ್ ಟ್ವಿಸ್ಟ್ ; ಪೋಷಕರಿಂದ...

BIG NEWS : ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್’ಗೆ ಬಿಗ್ ಟ್ವಿಸ್ಟ್ ; ಪೋಷಕರಿಂದ ಕಿಡ್ನ್ಯಾಪ್ ಶಂಕೆ.!

ಚಿಕ್ಕಮಗಳೂರು :   ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಜಲಪಾತದ ಬಳಿ ನಿಗೂಢವಾಗಿ ನಾಪತ್ತೆಯಾಗಿರುವ ಕೇರಳದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದನಾ (15) ಪತ್ತೆಗಾಗಿ ಮೂರನೇ ದಿನವೂ (ಏಪ್ರಿಲ್ 9-10) ತೀವ್ರ ಶೋಧ ಕಾರ್ಯ ಮುಂದುವರಿದಿದೆ.

ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಹಾಗೂ SDRF ತಂಡಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಮಗು ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಚಿಕ್ಕಮಗಳೂರಿನ ಬಾಬಾಬುಡನ್ ಗಿರಿಯ ದತ್ತಪೀಠಕ್ಕೆ ಪ್ರವಾಸಕ್ಕೆಂದು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ನಾಪತ್ತೆಯಾಗಿ ನಾಲ್ಕು ದಿನ ಕಳೆದರೂ ಇನ್ನೂ ಪತ್ತೆಯಾಗಿಲ್ಲ. ಹಾವೇರಿ ಜಿಲ್ಲೆಯ ಸವಣೂರು ಮೂಲದ ಈ ಯುವತಿ ಪ್ರಪಾತಕ್ಕೆ ಬಿದ್ದಿರಬಹುದು ಎಂಬ ಶಂಕೆಯಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಂದಕಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ. ಆದರೆ, ಯುವತಿಯ ತಾಯಿ ತನ್ನ ಮಗಳನ್ನು ಯಾರೋ ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಸಂಶಯ ವ್ಯಕ್ತಪಡಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ. ಸದ್ಯ ನಾಪತ್ತೆಯಾದ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹುಡುಕಾಟ ಮುಂದುವರಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳವು ಬಯಲು ಪ್ರದೇಶದಂತಿದ್ದು, ಅಲ್ಲಿಂದ ಬಾಲಕಿ ಕೇವಲ 10 ನಿಮಿಷಗಳಲ್ಲಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಪಹರಣದ ಸಾಧ್ಯತೆಯನ್ನೂ ತಳ್ಳಿಹಾಕದೆ ತನಿಖೆ ನಡೆಸುತ್ತಿದ್ದಾರೆ. ದಟ್ಟವಾದ ಮಂಜು ಮತ್ತು ಕಡಿದಾದ ಹಳ್ಳ-ಕೊಳ್ಳಗಳಿಂದ ಕೂಡಿದ ಈ ಪ್ರದೇಶದಲ್ಲಿ ಬಾಲಕಿಯ ಸುಳಿವಿಗಾಗಿ ಅರಣ್ಯ ಇಲಾಖೆಯು ಅತ್ಯಾಧುನಿಕ ಥರ್ಮಲ್ ಡ್ರೋನ್‌ಗಳನ್ನು ಬಳಸುತ್ತಿದೆ.

·  ಪೋಲಿಸ್ ತಂಡಗಳ ಭೇಟಿ: ಕೇರಳದ ಪಾಲಕ್ಕಾಡ್‌ನಿಂದಲೂ ಪೊಲೀಸ್ ತಂಡವೊಂದು ಚಿಕ್ಕಮಗಳೂರಿಗೆ ಆಗಮಿಸಿದ್ದು, ಸ್ಥಳೀಯ ಪೊಲೀಸರೊಂದಿಗೆ ಸಮನ್ವಯ ಸಾಧಿಸುತ್ತಿದೆ.

·  ಚೆಕ್-ಪೋಸ್ಟ್ ಪರಿಶೀಲನೆ : ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್‌ಗಿರಿ ಭಾಗದ ಎಲ್ಲಾ ಚೆಕ್-ಪೋಸ್ಟ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಕೂಲಂಕಷವಾಗಿ ಪರಿಶೀಲಿಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular