ಧರ್ಮಸ್ಥಳ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಸ್ಥಳದ ಆರನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕೇಸ್ ಗೆ ಸಂಬಂಧಿಸಿದಂತೆ ಇಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. 2 ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಲ್ಯಾಪ್ ಟಾಪ್ ನಲ್ಲಿ ಎಂಟ್ರಿ ಮಾಡಿಕೊಂಡಿದೆ.
ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. 2 ಎಲುಬುಗಳು ಸಿಕ್ಕ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೆಚ್ಚಿನ ಆಳ ತೆಗೆಯಲು ಮುಂದಾಗಿದ್ದಾರೆ. ಹಾಗೂ ಅಕ್ಕ ಪಕ್ಕದ ಜಾಗದಲ್ಲಿ ಕೂಡ ಅಗೆಯಲು ಎಸ್ ಐ ಟಿ (SIT) ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ .ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಆದರೆ ದೇಹದ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.