HomeLatest NewsBREAKING : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್'ಗೆ ಬಿಗ್ ಟ್ವಿಸ್ಟ್ : 6 ನೇ...

BREAKING : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಕೇಸ್’ಗೆ ಬಿಗ್ ಟ್ವಿಸ್ಟ್ : 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಪತ್ತೆ.!

ಧರ್ಮಸ್ಥಳ : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕಾಗಿದ್ದು, ಸ್ಥಳದ ಆರನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕೇಸ್ ಗೆ ಸಂಬಂಧಿಸಿದಂತೆ ಇಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ. 2 ಮೂಳೆಗಳನ್ನು ವಶಕ್ಕೆ ಪಡೆದ ಎಸ್ ಐ ಟಿ ಲ್ಯಾಪ್ ಟಾಪ್ ನಲ್ಲಿ ಎಂಟ್ರಿ ಮಾಡಿಕೊಂಡಿದೆ.

ದೂರುದಾರ ಗುರುತಿಸಿದ 6 ನೇ ಪಾಯಿಂಟ್ ನಲ್ಲಿ 2 ಮೂಳೆಗಳು ಸಿಕ್ಕಿದೆ ಎಂಬ ಮಾಹಿತಿ ಲಭ್ಯವಾಗಿದೆ. 2 ಎಲುಬುಗಳು ಸಿಕ್ಕ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೆಚ್ಚಿನ ಆಳ ತೆಗೆಯಲು ಮುಂದಾಗಿದ್ದಾರೆ. ಹಾಗೂ ಅಕ್ಕ ಪಕ್ಕದ ಜಾಗದಲ್ಲಿ ಕೂಡ ಅಗೆಯಲು ಎಸ್ ಐ ಟಿ (SIT) ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ .ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಆದರೆ ದೇಹದ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular