ಬೆಂಗಳೂರು : ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮಾಲೀಕರ ವಿರುದ್ಧವೇ FIR ದಾಖಲು ದಾಖಲಾಗಿದೆ.
ಹೌದು, ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೀಕರು, ಮ್ಯಾನೇಜರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕೆಫೆ ಮಾಲೀಕರಾದ ದಿವ್ಯಾ, ರಾಘವೇಂದ್ರ ರಾವ್ ಹಾಗೂ ಮ್ಯಾನೇಜರ್ ಸಮಂತ್ ವಿರುದ್ಧ ಸುಳ್ಲು ದೂರು ನೀಡಿ, ಮಾನಹಾನಿ ಮಾಡಿದ ಆರೋಪದಡಿ ಎಫ್ ಐ ಅರ್ ದಾಖಲಾಗಿದೆ.
ರಾಮೇಶ್ವರಂ ಕೆಫೆ ಊಟದಲ್ಲಿ ಹುಳ ಪತ್ತೆಯಾಗಿತ್ತು. ಈ ಬಗ್ಗೆ ಯುವಕರು ವಿಡಿಯೋ ಮಾಡಿದ್ದರು. ಇದೇ ವೇಳೆ ಕೆಫೆಗೆ ಹಣಕ್ಕೆ ಬೇಡಿಕೆ ಇಟ್ಟು ಕರೆಯೊಂದು ಬಂದಿತ್ತು. ವಿಡಿಯೋ ಮಾಡಿದ್ದ ಯುವಕರೇ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಿ ಕೆಫೆ ಮಾಲೀಕರು ದೂರು ನೀಡಿದ್ದರು. ಆದರೆ ವಿಡಿಯೋ ಇಟ್ಟುಕೊಂಡು ಇನ್ನೋರ್ವ ಬ್ಲ್ಯಾಕ್ ಮೇಲ್ ಮಾಡಿದ್ದ. ಈ ಪ್ರಕರಣ ವಯ್ಯಾಲಿಕಾವಲ್ ಠಾಣೆಗೆ ವರ್ಗಾವಣೆಯಾಗಿತ್ತು.
ತನಿಖೆ ವೇಳೆ ವಿಡಿಯೋ ಮಾಡಿದ್ದ ಯುವಕರು ಬ್ಲ್ಯಾಕ್ ಮೇಲ್ ಮಾಡಿಲ್ಲ ಎಂಬುದು ಖಚಿತಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿಡಿಯೋ ಮಾಡಿದ್ದ ಯುವಕ, ತನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಏರ್ ಪೋರ್ಟ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ಈ ಹಿನ್ನೆಲೆಯಲ್ಲಿ ರಾಮೇಶ್ವರಂ ಕೆಫೆ ಮಾಲೀಕರು ಹಾಗೂ ಮ್ಯಾನೇಜರ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
