ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಊಟ ಸೇವಿಸಿದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ.ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ತಂದೆ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ತಂದೆ ರಮೇಶ್ (35) ಪುತ್ರಿ ನಾಗಮ್ಮ (8) ಎಂದು ಗುರುತಿಸಲಾಗಿದೆ. . ಇನ್ನು ರಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ದೀಪ (6) (ಮತ್ತೋರ್ವ ಪುತ್ರಿ) ಸಾವನಪ್ಪಿದ್ದಾಳೆ, ರಮೇಶ್ ಪತ್ನಿ ಪದ್ಮ ಅವರನ್ನು ರಿಮ್ಸ್ ಆಸ್ಪತ್ರೆಗೆ ಸದ್ಯ ಕುಟುಂಬಸ್ಥರು ಕರೆದುಕೊಂಡು ಹೋಗಿದ್ದಾರೆ ಇಬ್ಬರು ಮಕ್ಕಳಾದ ಕೃಷ್ಣ, ಚೈತ್ರಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆ ನೋವಿಂದ ಬಳಲುತ್ತಿದ್ದವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಪ್ರಕರಣಕ್ಕೆ ಬಿಗ್ ಟ್ವಿಸ್ಟ್.!
ಹೊಲದಲ್ಲಿ ಕ್ರಿಮಿನಾಶಕ ಸಿಂಪಡಿಸಿದ್ದ ಚವಳಿಕಾಯಿ ತಿಂದಿರುವ ಶಂಕೆ ವ್ಯಕ್ತವಾಗಿದೆ. ಹೊಲದಲ್ಲಿ ಬೆಳೆದಿದ್ದ ಚವಳಿಕಾಯಿಗೆ ಕ್ರಿಮಿನಾಶಕ ಸಿಂಪಡಿಸಲಾಗಿತ್ತು, ಇದನ್ನು ತಿಂದು ಮೃತಪಟ್ಟಿರುವ ಶಂಕೆಯಿದೆ ಎಂದು ಮೃತರ ಸಂಬಂಧಿ ತಿಮ್ಮಯ್ಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ನಿನ್ನೆ ರಾತ್ರಿ ಚವಳಿಕಾಯಿ ಪಲ್ಯ, ರೊಟ್ಟಿ, ಅನ್ನ, ಸಾಂಬಾರ್ ಸೇವಿಸಿ ಮಲಗಿದ್ದ ಆರು ಜನರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತು. ಹೊಟ್ಟೆ ನೋವಿನಿಂದ ಅಸ್ವಸ್ಥಗೊಂಡವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ತಂದೆ ರಮೇಶ್ ಹಾಗೂ ಪುತ್ರಿ ನಾಗಮ್ಮ ಸಾವನ್ನಪ್ಪಿದ್ದರೆ. ಆಸ್ಪತ್ರೆ ಮಾರ್ಗ ಮಧ್ಯೆ ದೀಪಾ ಸಾವನ್ನಪ್ಪಿದ್ದಾರೆ.. ಕವಿತಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.