ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೇರಹಟ್ಟಿ ಮೂಲದ ವರ್ಷಿತಾ (19) ಕೊಲೆಯಾದ ವಿದ್ಯಾರ್ಥಿನಿ. ಆರೋಪಿ ಚೇತನ್ ಎಂಬಾತ ವಿದ್ಯಾರ್ಥಿನಿಯನ್ನು ಕೊಲೆ ಮಾಡಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ.
ಕ್ಯಾನ್ಸರ್ ಮೂರನೇ ಹಂತದಲ್ಲಿರುವ ಯುವಕ ಚೇತನ್ ವರ್ಷಿತಾಳನ್ನು ಇಷ್ಟಪಡುತ್ತಿದ್ದನು. ವರ್ಷಿತಾ ಬೇರೆ ಹುಡುಗನ ಜೊತೆ ಇರುವುದನ್ನು ನೋಡಿದ ಚೇತನ್ ಗಲಾಟೆ ಮಾಡಿ ವರ್ಷಿತಾಳನ್ನ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸಿಟ್ಟಿನಿಂದ ವರ್ಷಿತಾ ಮೇಲೆ ಹಲ್ಲೆ ನಡೆಸಲಾಗಿದ್ದು, ಆಕೆ ಕೆಳಗೆ ಬಿದ್ದು ಮೃತಪಟ್ಟಿದ್ದಾಳೆ. ನಂತರ ಯುವಕ ಚೇತನ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ.