HomeLatest NewsBIG UPDATE : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್ : ಯುವಕನಿಂದ...

BIG UPDATE : ಬೆಂಗಳೂರಲ್ಲಿ ಟೆಕ್ಕಿ ಶರ್ಮಿಳಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್ : ಯುವಕನಿಂದ ರೇಪ್ & ಮರ್ಡರ್ ಶಂಕೆ.!

ಬೆಂಗಳೂರು : ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಶರ್ಮಿಳಾ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ತನಿಖೆಯ ವೇಳೆ ಹಲವು ವಿಚಾರಗಳು ಬೆಳಕಿಗೆ ಬಂದಿದೆ.

ಟೆಕ್ಕಿ ಶರ್ಮಿಳಾರನ್ನು ಆರೋಪಿ ಕರ್ನಲ್ ಕುರೈನ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಶಂಕಿಸಲಾಗಿದೆ. ಕರ್ನಲ್ ಕುರೈನ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿರುವ ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.

ರಾಮಮೂರ್ತಿ ಪೊಲೀಸ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರನ್ನು ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಿಳಾ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ ನಲ್ಲಿ ವಾಸವಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇರಳ ಮೂಲದ ಆರೋಪಿ ಕರ್ನಲ್ ಕುರೈ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ ಮನೆಯಲ್ಲಿಯೇ ಕರ್ನಲ್ ಕುರೈ ವಾಸವಾಗಿದ್ದ. ಟೆಕ್ಕಿ ಶರ್ಮಿಳಾ ಅವರನ್ನು ಪ್ರೀತಿಸುತ್ತಿದ್ದ. ದಿನಾಲು ಮಾತುಕತೆ ನಡೆಸುತ್ತಿದ್ದ ಆರೋಪಿ ತಾನು ಪ್ರೀತಿಸುತ್ತಿದ್ದ ವಿಚಾರವನ್ನು ಟೆಕ್ಕಿ ಶರ್ಮಿಳಾ ಅವರಿಗೆ ಹೇಳಿರಲಿಲ್ಲ.

ಜನವರಿ 3ರಂದು ಬಾಲ್ಕನಿಯ ಮೂಲಕ ಮನೆಯೊಳಗೆ ನುಗ್ಗಿದ್ದ ಆರೋಪಿ ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾ ಅವರನ್ನು ಅಪ್ಪಿಕೊಂಡಿದ್ದ. ಅವನಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕುತ್ತಿಗೆ ಭಾಗಕ್ಕೆ ಹೊಡೆದಿದ್ದ. ಈ ವೇಳೆ ಟೆಕ್ಕಿ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎನ್ನಲಾಗಿದೆ. ನಂತರ ಮನೆಗೆ ಬೆಂಕಿ ಬಿದ್ದು ಉಸಿರು ಗಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು. ಅನುಮಾನಾಸ್ಪದ ಸಾವು ಎಂದು ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಬೆಂಗಳೂರಿನಲ್ಲಿ ಈತ ದ್ವಿತೀಯ ಪಿಯುಸಿ ಓದುತ್ತಿದ್ದನು.

ಈ ಎಲ್ಲಾ ವಿಚಾರಗಳು ಬೆಳಕಿಗೆ ಬಂದ ಬೆನ್ನಲ್ಲೇ ಈತ ಟೆಕ್ಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಆತನ ಬಾಯಿ ಬಿಡಿಸುಸುತ್ತಿದ್ದಾರೆ. ಆತನ ವಿರುದ್ಧ ಅತ್ಯಾಚಾರ ಕೇಸ್ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular