HomeKarnatakaನೀಟ್ ಪರೀಕ್ಷೆ ಬರೆದಿದ್ದ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪಿಯುಸಿಯಲ್ಲೇ ವಿದ್ಯಾರ್ಥಿನಿ ಫೇಲ್

ನೀಟ್ ಪರೀಕ್ಷೆ ಬರೆದಿದ್ದ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪಿಯುಸಿಯಲ್ಲೇ ವಿದ್ಯಾರ್ಥಿನಿ ಫೇಲ್

ಕಲಬುರಗಿ: ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಭಾಗ್ಯಶ್ರೀ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿಯೇ ಅನುತ್ತೀರ್ಣರಾಗಿದ್ದ ಸಂಗತಿ ಬೆಳಕಿಗೆ ಬಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಾಗ ಭಾಗ್ಯಶ್ರೀ ತನಗೆ ಶೇಕಡ 92 ರಷ್ಟು ಫಲಿತಾಂಶ ಬಂದಿದೆ ಎಂದು ಪೋಷಕರ ಬಳಿ ಹೇಳಿಕೊಂಡಿದ್ದು, ನೀಟ್ ಪರೀಕ್ಷೆಯನ್ನು ಕೂಡ ಬರೆದಿದ್ದರು.

ಆದರೆ ನಿನ್ನೆ ಏಕಾಏಕಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪೋಷಕರು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪುತ್ರಿ ಯಾವುದೋ ವಿಷಯದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯಾರ ಮೇಲೆಯೂ ದೂರುವುದಿಲ್ಲ ಎಂದು ಅವರು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಗ್ಯಶ್ರೀ ಆತ್ಮಹತ್ಯೆಗೆ ಕಾರಣ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದು,  ಭಾಗ್ಯಶ್ರೀ ಅಂಕಪಟ್ಟಿ ಕೈ ಸೇರುತ್ತಿದ್ದಂತೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬಂದಾಗ ತನಗೆ ಶೇಕಡ 92 ರಷ್ಟು ಫಲಿತಾಂಶ ಬಂದಿದೆ ಎಂದು ಹೇಳಿಕೊಂಡಿದ್ದ ಭಾಗ್ಯಶ್ರೀ ನೀಟ್ ಪರೀಕ್ಷೆಯನ್ನು ಬರೆದಿದ್ದಳು. ಗಣಿತ ಮತ್ತು ಭೌತಶಾಸ್ತ್ರ ವಿಷಯದಲ್ಲಿ ಅನುತ್ತೀರ್ಣಳಾಗಿದ್ದ ಭಾಗ್ಯಶ್ರೀ ಮರು ಪರೀಕ್ಷೆ ಬರೆದಿದ್ದಳು. ಭೌತಶಾಸ್ತ್ರದಲ್ಲಿ 51 ಅಂಕ ಪಡೆದು ತೇರ್ಗಡೆಯಾಗಿದ್ದಳು. ಆದರೆ, ಗಣಿತದಲ್ಲಿ 24 ಅಂಕ ಬಂದಿದ್ದರಿಂದ ಅನುತ್ತೀರ್ಣರಾಗಿದ್ದಾಳೆ.   

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular