BREAKING : ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ತಿಂಡಿಯಲ್ಲಿ ಜಿರಳೆ ಪತ್ತೆ ವಿವಾದಕ್ಕೆ ಬಿಗ್ ಟ್ವಿಸ್ಟ್ : ದೂರು ದಾಖಲು.!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನೀಡಿದ ತಿಂಡಿಯಲ್ಲಿ ಜಿರಳೆ ಪತ್ತೆಯಾಗಿತ್ತು ಎಂಬ ಸುದ್ದಿ ಭಾರಿ ವಿವಾದಕ್ಕೆ ಕಾರಣವಾಗುತ್ತು. ಇದೀಗ ಈ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೆಫೆಗೆ ತಿಂಡಿಗೆ ತಿನ್ನಲು ಬಂದಿದ್ದ ಗ್ರಾಹಕ ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶ ಇಟ್ಟುಕೊಂಡೇ ಬಂದಿದ್ದ ಎನ್ನಲಾಗಿದೆ. ಆ ವ್ಯಕ್ತಿಯೇ ಪೊಂಗಲ್ ತಿಂಡಿಯಲ್ಲಿ ಹುಳು ಇಟ್ಟಿದ್ದಾರೆ ಎಂದು ಕೆಫೆ ಮಾಲೀಕರು ವಾದಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ರಾಘವೇಂದ್ರರಾವ್ ಪ್ರತಿಕ್ರಿಯೆ ನೀಡಿದ್ದು, ನಮ್ಮ ಹೋಟೆಲ್‌ಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನಆದ್ಯತೆ ನೀಡುತ್ತೇವೆ. ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿರುವ ಫೋಟೋ ಮತ್ತು ಪೊಂಗಲ್‌ನಲ್ಲಿನ ಹುಳು ವೀಡಿಯೋವನ್ನುಗಮನಿಸಿದರೆ ಜೀವಂತವಾಗಿರುವುದು ಕಂಡು ಬರುತ್ತದೆ ಎಂದಿದ್ದಾರೆ. ಅಲ್ಲದೇ ನಮಗೆ ಕರೆ ಮಾಡಿ ಬೆದರಿಸಿ 25 ಲಕ್ಷ ರು.ಗಳಿಗೆ ಬೇಡಿಕೆಯನ್ನೂ ಇಟ್ಟಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಎಲ್ಲ ಮಾಹಿತಿ ನೀಡಲಾಗಿದೆ. ಇಂಥ ಘಟನೆಗಳು ನಡೆದಿರುವುದು ಇದೇನು ಮೊದಲಲ್ಲ, ಈ ಹಿಂದೆಯೂ ನಡೆದಿವೆ ಎಂದು ತಿಳಿಸಿದ್ದಾರೆ.ಇತ್ತೀಚೆಗಷ್ಟೇ ಓಪನ್ ಆದ ರಾಮೇಶ್ವರಂ ಕೆಫೆಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವಹಳ್ಳಿ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ನೀಡಿದ ಪೊಂಗಲ್ ನಲ್ಲಿ ಜಿರಳೆ ಪತ್ತೆಯಾಗಿದೆ ಎಂದು ಹೇಳಲಾಗಿತ್ತು.
,

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read