HomeIndiaBIG UPDATE : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಸಾವಿನ ಸಂಖ್ಯೆ 17 ಕ್ಕೇರಿಕೆ...

BIG UPDATE : ಮಹಾ ಕುಂಭಮೇಳದಲ್ಲಿ ಭೀಕರ ಕಾಲ್ತುಳಿತ : ಸಾವಿನ ಸಂಖ್ಯೆ 17 ಕ್ಕೇರಿಕೆ |WATCH VIDEO

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಮೃತರ ಸಂಖ್ಯೆ 17 ಕ್ಕೇರಿಕೆಯಾಗಿದೆ.

ಅವಘಡದಲ್ಲಿ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ಘಟನೆ ನಡೆದಿದೆ. ಕೋಟ್ಯಂತರ ಭಕ್ತರು ಪುಣ್ಯ ಸ್ನಾನಕ್ಕಾಗಿ ಆಗಮಿಸಿದ್ದಾರೆ. ಈ ವೇಳೆ ಕಾಲ್ತುಳಿತ ಉಂಟಾಗಿ ಹಲವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಗಾಯಗೊಂಡವರನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿದ್ದಾರೆ. ಗಾಯಾಳುಗಳಿಗೆ ಕೂಡಲೇ ಚಿಕಿತ್ಸೆ ಕೊಡಿಸುವಂತೆ ಸೂಚನೆ ನೀಡಿದ್ದಾರೆ. ಭಕ್ತರಿಗೆ ಯಾವುದೇ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

ಆಂಬ್ಯುಲೆನ್ಸ್ ಗಳನ್ನು ಸ್ಥಳಕ್ಕೆ ರವಾನಿಸಲಾಯಿತು ಮತ್ತು ಗಾಯಗೊಂಡವರನ್ನು ಕುಂಭದ ಸೆಕ್ಟರ್ 2 ರ ತಾತ್ಕಾಲಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಕಾಲ್ತುಳಿತದ ಹಿನ್ನೆಲೆಯಲ್ಲಿ ಅಮೃತ್ ಸ್ನಾನವನ್ನು ಇಂದು ರದ್ದುಪಡಿಸಲಾಗಿದೆ ಎಂದು ಅಖಾರಾ ಪರಿಷತ್ (ಕೌನ್ಸಿಲ್) ಘೋಷಿಸಿದೆ.ಸಂಗಮದಲ್ಲಿ ಸ್ನಾನ ಮಾಡಿದ ನಂತರ ಸ್ಥಳವನ್ನು ಖಾಲಿ ಮಾಡುವಂತೆ ಅಧಿಕಾರಿಗಳು ಭಕ್ತರಿಗೆ ಮನವಿ ಮಾಡಿದರು.ಗಾಯಗೊಂಡವರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲವಾದರೂ, ಘಟನೆಯಲ್ಲಿ ಕನಿಷ್ಠ 30 ರಿಂದ 40 ಜನರು ಗಾಯಗೊಂಡಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular