HomeKarnatakaBIG UPDATE : ಬೆಂಗಳೂರಲ್ಲಿ ರುಂಡ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವರ್’ಗೆ ಕರೆ ಮಾಡಿ...

BIG UPDATE : ಬೆಂಗಳೂರಲ್ಲಿ ರುಂಡ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಲವರ್’ಗೆ ಕರೆ ಮಾಡಿ ರೈಲಿಗೆ ತಲೆಕೊಟ್ಟಿದ್ದ ಯುವಕ!

ಬೆಂಗಳೂರು: ಬೆಂಗಳೂರಿನಲ್ಲಿ ವ್ಯಕ್ತಿಯ ರುಂಡ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಮೃತನ ಗುರುತು ಪತ್ತೆಯಾಗಿದೆ. ವರ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೊಡತಿ ಗೇಟ್ ಸಮೀಪದ ಮೈದಾನದಲ್ಲಿ ದೇಹವಿಲ್ಲದ ರುಂಡ ಪತ್ತೆಯಾಗಿತ್ತು.ಬೆಂಗಳೂರಿನಲ್ಲಿ ತಲೆಯಿಲ್ಲದ ದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆಂಧ್ರ ಮೂಲದ ವಿಶ್ವನಾಥ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೂ ಮುನ್ನ ಪ್ರೇಯಸಿಗೆ ಕರೆ ಮಾಡಿ ಮಾತನಾಡಿದ್ದ ಎಂಬ ಮಾಹಿತಿ ತನಿಖೆಯಲ್ಲಿ ಬಯಲಾಗಿದೆ. ರೈಲು ಹಳಿಯಲ್ಲಿ ಪತ್ತೆಯಾಗಿದ್ದ ದೇಹದ ರುಂಡವನ್ನು ನಾಯಿಗಳು ಸುಮಾರು 400 ಮೀಟರ್ ದೂರದ ಮೈದಾನಕ್ಕೆ ಎಳೆದುಕೊಂಡು ಹೋಗಿದ್ದವು ಎನ್ನಲಾಗಿದೆ.

ಈ ರುಂಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಆಂಧ್ರ ಮೂಲದ ವಿಶ್ವನಾಥ್ (28) ಅವರದ್ದೇ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ವಿಶ್ವನಾಥ್ ಆತ್ಮಹತ್ಯೆಗೂ ಮುನ್ನ ತಮ್ಮ ಪ್ರೇಯಸಿಗೆ ಕರೆ ಮಾಡಿ ಮಾತನಾಡಿದ್ದರು ಎನ್ನಲಾಗಿದೆ. ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿದಾಗ ರೈಲು ಹಳಿಯಲ್ಲಿ ತಲೆಯಿಲ್ಲದ ದೇಹ ಪತ್ತೆಯಾಗಿತ್ತು. ಆದರೆ ಮೃತನ ರುಂಡ ಮಾತ್ರ ಕಾಣೆಯಾಗಿತ್ತು. ಬಳಿಕ ಸುಮಾರು 400 ಮೀಟರ್ ದೂರದಲ್ಲಿದ್ದ ಕ್ರಿಕೆಟ್ ಮೈದಾನದಲ್ಲಿ ನಾಯಿಗಳು ರುಂಡವನ್ನು ಎಳೆದುಕೊಂಡು ಹೋಗಿದ್ದವು ಸ್ಥಳೀಯರು ಮೈದಾನದಲ್ಲಿ ರುಂಡ ಇರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೊದಲು ಇದೊಂದು ಕೊಲೆ ಪ್ರಕರಣ ಎಂದು ಶಂಕಿಸಲಾಗಿತ್ತು,. ಆದರೆ ಮಾಹಿತಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ರುಂಡದ ರಹಸ್ಯವನ್ನು ಬಯಲು ಮಾಡಿದ್ದಾರೆ. ಮೈದಾನದಲ್ಲಿ ಸಿಕ್ಕ ತಲೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಆಂಧ್ರ ಮೂಲದ ವಿಶ್ವನಾಥ್ ಅವರದ್ದೇ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ . ಸದ್ಯ ವಿಶ್ವನಾಥ್ ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular