BIG UPDATE : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ :  ಮೃತರ ಸಂಖ್ಯೆ 800 ಕ್ಕೇರಿಕೆ.!

ಕಾಬುಲ್ : ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, 800 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಗ್ನೇಯ ಅಫ್ಘಾನಿಸ್ತಾನದಲ್ಲಿ ರಾತ್ರಿ 11:47ರ ಸುಮಾರಿಗೆ ಭೀಕರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ. ಕಟ್ಟಡಗಳು, ಮನೆಗಳು ಸಂಪೂರ್ಣ ನೆಲಸಮವಾಗಿದ್ದು, ಅವಸೇಷಗಳಡಿ ಸಿಲುಕಿ ಹಲವರು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಮಾಹಿತಿ ಪ್ರಕಾರ 800 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಭೂಕಂಪದಿಂದಾಗಿ ಕುನಾರ್ ಪ್ರಾಂತ್ಯದ ಮೂರು ಹಳ್ಳಿಗಳು ಸಂಪೂರ್ಣ ನೆಲಸಮವಾಗಿವೆ. ಹಲವು ಹಳ್ಳಿಗಳಲ್ಲಿ ತೀವ್ರ ಹಾನಿಯುಂಟಾಗಿದ್ದು, ಒಂದೇ ಹಳ್ಳಿಯಲ್ಲಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read