HomeKarnatakaBIG UPDATE : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ...

BIG UPDATE : ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ.!

ಬೆಂಗಳೂರು : ಬೆಂಗಳೂರಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮತ್ತೋರ್ವ ಕಾರ್ಮಿಕ ಮೃತಪಟ್ಟಿದ್ದು, ಮೃತರ ಸಂಖ್ಯೆ 2 ಕ್ಕೇರಿಕೆಯಾಗಿದೆ.

ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ.ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ.

ಕಟ್ಟಡದಲ್ಲಿ ಒಟ್ಟು 6 ಮಂದಿ ಕೆಲಸ ಮಾಡುತ್ತಿದ್ದರು, ನಾಲ್ವರು ಪ್ರಾಣಾಪಯದಿಂದ ಪಾರಾಗಿದ್ದಾರ ಎಂದು ತಿಳಿದು ಬಂದಿದೆ.ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular