HomeIndiaBIG UPDATE : ಜೈಪುರದಲ್ಲಿ 'CNG' ಗ್ಯಾಸ್ ತುಂಬಿದ ಟ್ಯಾಂಕರ್ ಸ್ಪೋಟಗೊಂಡು ಐವರು ಸಜೀವ ದಹನ,...

BIG UPDATE : ಜೈಪುರದಲ್ಲಿ ‘CNG’ ಗ್ಯಾಸ್ ತುಂಬಿದ ಟ್ಯಾಂಕರ್ ಸ್ಪೋಟಗೊಂಡು ಐವರು ಸಜೀವ ದಹನ, 40 ಹೆಚ್ಚು ವಾಹನಗಳು ಸುಟ್ಟು ಭಸ್ಮ |Watch Video

ಜೈಪುರ: ರಾಜಸ್ಥಾನದ ಜೈಪುರದ ಅಜ್ಮೀರ್ ರಸ್ತೆಯ ಪೆಟ್ರೋಲ್ ಪಂಪ್ ಬಳಿ ಶುಕ್ರವಾರ ಬೆಳಿಗ್ಗೆ ಎಲ್ಪಿಜಿ (ದ್ರವೀಕೃತ ಪೆಟ್ರೋಲಿಯಂ ಅನಿಲ) ಮತ್ತು ಸಿಎನ್ಜಿ (CNG) ಟ್ರಕ್ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಟ್ರಕ್ ವಾಹನಗಳಿಗೆ ಡಿಕ್ಕಿ ಹೊಡೆದ ನಂತರ ಹಲವಾರು ವಾಹನಗಳು ಬೆಂಕಿಗೆ ಆಹುತಿಯಾಗಿದ್ದು, ಐದು ಜನರು ಸಜೀವ ದಹನವಾಗಿದ್ದಾರೆ. ಪೊಲೀಸರು ಮತ್ತು ಆಡಳಿತ ತಂಡಗಳು ಬೆಂಕಿಯನ್ನು ನಿಯಂತ್ರಿಸಲು ಕೆಲಸ ಮಾಡುತ್ತಿವೆ.

ಎಲ್ ಪಿಜಿ ಹಾಗೂ ಸಿಎನ್ ಜಿ ಟ್ರಕ್ ನಡುವೆ ಈ ಅಪಘಾತ ಸಂಭವಿಸಿದೆ. ಪೆಟ್ರೋಲ್ ಪಂಪ್ ಮುಂದೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ಕೆಲವರಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.ಘಟನೆಯಲ್ಲಿ 40 ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular