HomeLatest NewsBIG UPDATE: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನ ಸ್ಥಳದಲ್ಲೇ...

BIG UPDATE: ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಕೋಲಾರದ ಇಬ್ಬರು ಮಕ್ಕಳು ಸೇರಿ 5 ಜನ ಸ್ಥಳದಲ್ಲೇ ಸಾವು

ಆಂಧ್ರಪ್ರದೇಶದಲ್ಲಿ ನಡೆದ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕದ ಕೋಲಾರ ಜಿಲ್ಲೆಯ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಚಿಕ್ಕಹೊಸಹಳ್ಳಿ ನಿವಾಸಿಗಳಾದ ಸತೀಶ್, ಮೀನಾಕ್ಷಿ ಕುಟುಂಬದವರು ಮೃತಪಟ್ಟಿದ್ದಾರೆ ಎನ್ನುವುದು ಪತ್ತೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿಕ್ಕಹೊಸಹಳ್ಳಿಯಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಇಂದು ಬೆಳಗಿನಜಾವ 5 ಗಂಟೆಗೆ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಮಂತ್ರಾಲಯಕ್ಕೆ ಹೊರಟಿದ್ದ ಇಬ್ಬರು ಮಕ್ಕಳು ಸೇರಿ ಐವರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮತ್ತೊಂದು ಕಾರ್ ನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular