HomeKarnatakaBIG UPDATE : ಪರ್ಫ್ಯೂಮ್ ಗೋಡೌನ್ ನಲ್ಲಿ ಅಗ್ನಿ ಅವಘಡ ಪ್ರಕರಣ : ಮತ್ತೋರ್ವ ಬಾಲಕ...

BIG UPDATE : ಪರ್ಫ್ಯೂಮ್ ಗೋಡೌನ್ ನಲ್ಲಿ ಅಗ್ನಿ ಅವಘಡ ಪ್ರಕರಣ : ಮತ್ತೋರ್ವ ಬಾಲಕ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

ಬೆಂಗಳೂರು : ಪರ್ಫ್ಯೂಮ್ ಗೋಡೌನ್ನಲ್ಲಿ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಬಾಲಕ ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಐದಕ್ಕೇರಿಕೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ (10) ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ, ಸಾಜಿದ್ (15) ಮೃತಟ್ಟಿದ್ದನು. ಈ ಮೂಲಕ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಕಳೆದ ನಾಲ್ಕು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಯಾನ್ ಹಾಗೂ ಸಾಜಿದ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಮೂರು ದಿನಗಳ ಹಿಂದೆ ಭೀಕರ ಬೆಂಕಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಸಜೀವದಹನವಾಗಿದ್ದರು. ಹಲವರು ಗಾಯಗೊಂಡಿದ್ದರು. ಇದೀಗ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular