HomeKarnatakaBIG UPDATE : ಯಜಮಾನಿಯರಿಗೆ ಗುಡ್'ನ್ಯೂಸ್ : ಇಂದಿನಿಂದಲೇ 2 ತಿಂಗಳ ‘ಗೃಹಲಕ್ಷ್ಮಿ’...

BIG UPDATE : ಯಜಮಾನಿಯರಿಗೆ ಗುಡ್’ನ್ಯೂಸ್ : ಇಂದಿನಿಂದಲೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ

ಬೆಂಗಳೂರು : ಹಣ ಬಾರದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು,ಇಂದಿನಿಂದಲೇ 2 ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ‘ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಇಂದಿನಿಂದಲೇ ಬಾಕಿ ಇರುವ ಜೂನ್ ಹಾಗೂ ಜುಲೈ ತಿಂಗಳ ‘ಗೃಹಲಕ್ಷ್ಮಿ’ ಹಣ ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ಐಟಿ ಮತ್ತು ಜಿಎಸ್ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ನೋಟರಿಯಿಂದ ಪಡೆದ ಪತ್ರ, ಆಡಿಟರ್ರವರಿಂದ ಪಡೆದ ಪತ್ರ, ಅರ್ಜಿದಾರರ ಮನವಿ ಪತ್ರ ನೀಡಲು ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೃಹಲಕ್ಷ್ಮಿ ಯೋಜನೆಯಡಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular