HomeKarnatakaBIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7...

BIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೇರಿಕೆ

ವಿಜಯಪುರ : ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ  ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರಿಸ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 7 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 8 ಮಂದಿ ಸಿಲುಕಿದ್ದರು. ಅದರಲ್ಲಿ ಒಬ್ಬರನ್ನು ನಿನ್ನೆ ರಕ್ಷಿಸಲಾಗಿದೆ. ಆದರೆ 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿ ಶವವನ್ನು ಹೊರಕ್ಕೆ ತರಲಾಗಿದೆ.

ದುರಂತದಲ್ಲಿ ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿ 7 ಜನ ಸಾವನ್ನಪ್ಪಿದ್ದಾರೆ. ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಚೀಲಗಳ ರಾಶಿ ಕುಸಿದು ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular