BIG UPDATE : ಕೇರಳದ ವಯನಾಡ್ ನಲ್ಲಿ ಭೂಕುಸಿತ ; 19 ಮಂದಿ ಸಾವು, 400ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ

ಕೇರಳ: ಕೇರಳದಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿದ್ದು, 19 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 400ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿದ್ದಾರೆ.

ಸಹಾಯವಾಣಿ ಸಂಖ್ಯೆಗಳು

ರಾಜ್ಯ ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಸಹಾಯ ಬಯಸುವವರಿಗಾಗಿ ನಿಯಂತ್ರಣ ಕೊಠಡಿ ಮತ್ತು ಸಹಾಯವಾಣಿ ಸಂಖ್ಯೆಗಳನ್ನು (9656938689 ಮತ್ತು 8086010833) ಬಿಡುಗಡೆ ಮಾಡಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳಿಗೆ ವಯನಾಡ್ ಗೆ ತೆರಳಲು ಆದೇಶಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ವಯನಾಡ್ ಮತ್ತು ಇತರ 9 ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಈಗಾಗಲೇ ಮುಚ್ಚಲಾಗಿದೆ.

ವಯನಾಡ್ ನಲ್ಲಿ ಇಂದು ಮುಂಜಾನೆಯಿಂದ ಸತತವಾಗಿ ಮೂರು ಗ್ರಾಮಗಳಲ್ಲಿ ಸಾಲು ಸಾಲು ಭೂ ಕುಸಿತ ಸಂಭವಿಸಿದೆ. ಪ್ರವಾಹದಂತೆ ಹರಿದು ಬಂದ ನೀರಿನ ರಭಸಕ್ಕೆ ಮನೆಗಳು, ಅಂಗಡಿಗಳು ಕೊಚ್ಚಿ ಹೋಗಿವೆ
ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read