BIG UPDATE : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ, ಕ್ಯಾಂಟರ್’ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವು.!

ಬಾಗಲಕೋಟೆ : ಬಾಗಲಕೋಟೆಯಲ್ಲಿ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಕ್ಯಾಂಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಧನ್ನೂರು ಗ್ರಾಮದ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಲಕ್ಷ್ಮಣ ವಡ್ಡರ್(55), ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕ(50), ಚಾಲಕ ರಫಿಕ್ ಮುಲ್ಲಾ(25) ಎಂದು ಗುರುತಿಸಲಾಗಿದೆ.

ಮುದ್ದೇಬಿಹಾಳದ ಕಡೆ ಹೊರಟ್ಟಿದ್ದ ಕಾರು ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.. ಸ್ಥಳಕ್ಕೆ ಹುನಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read