BIG UPDATE : ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ‘ಲಕ್ಷ್ಮೀ ಹೆಬ್ಬಾಳ್ಕರ್’ ಚೇತರಿಕೆ, 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚೇತರಿಸಿಕೊಂಡಿದ್ದು, 3 ದಿನದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ವಿಶ್ರಾಂತಿಯ ಅಗತ್ಯವಿದ್ದು, ಮೂರು ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತದೆ. ಅವರಿಗೆ ಬೆನ್ನುಹುರಿ ಪೆಟ್ಟಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಡಾ.ರವಿ ಪಾಟೀಲ್ ತಿಳಿಸಿದ್ದಾರೆ. ಚನ್ನರಾಜ ಹಟ್ಟಿಹೊಳಿ ಅವರಿಗೂ ಚಿಕಿತ್ಸೆ ಮುಂದುವರೆದಿದೆ.

ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಒಂದುವಾರ ವಿಶ್ರಾಂತಿಗೆ ಸೂಚಿಸಲಾಗಿದೆ ಎಂದರು. ಇನ್ನು ಸಚಿವರ ಗನ್ ಮ್ಯಾನ್ ಹಾಗೂ ಕಾರು ಚಾಲಕರಿಗೂ ಗಾಯಗಳಾಗಿತ್ತು, ಅವರಿಗೂ ಚಿಕಿತ್ಸೆ ನೀಡಿದ್ದೇವೆ ಎಂದು ತಿಳಿಸಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಹಿಟ್ & ರನ್ ಕೇಸ್ ದಾಖಲಾಗಿದೆ. ಟ್ರಕ್ ಚಾಲಕ ತಮ್ಮನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿ ಕಾರಿಗೆ ಗುದ್ದಿದ ಪರಿಣಾಮ ಈ ಅಪಘಾಯವಾಗಿದೆ ಎಂದು ಕಾರಿನ ಚಾಲಕ ಜಿ ಶಿವಪ್ರಸಾದ್ ಅವರು ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read