BIG UPDATE : ‘ಗಣೇಶ ಹಬ್ಬ’ದ ದಿನವೇ ರಾಜ್ಯದಲ್ಲಿ ‘ಭೀಕರ ಅಪಘಾತ’ : ಸ್ಥಳದಲ್ಲೇ ಐವರು ಸಾವು.!

ಬೆಂಗಳೂರು : ಗಣೇಶ ಹಬ್ಬದ ದಿನವೇ ರಾಜ್ಯದಲ್ಲಿ ಭೀಕರ ಅಪಘಾತಗಳು ಸಂಭವಿಸಿದ್ದು, ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ.

ಗಣಪತಿ ಮೂರ್ತಿ ತರಲು ಹೋಗುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಟಾಟಾ ಏಸ್ ಪಲ್ಟಿಯಾಗಿ ಬಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶ್ರೀಧರ್ (20) ಧನುಷ್ (20) ಮೃತ ಯುವಕರು.

ಗಣಪತಿ ಮೂರ್ತಿ ತರಲೆಂದು 9 ಯುವಕರು ಟಾಟಾ ಏಸ್ ನಲ್ಲಿ ಹೋಗುತ್ತಿದ್ದರು. ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಏಸ್ ಪಲ್ಟಿಯಾಗಿ ಬಿದ್ದಿದೆ. ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಯುವಕರಿಗೆ ತಲೆಯ ಭಾಗದಲ್ಲಿ ಗಂಭೀರ ಗಾಯಗಳಾಗಿವೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಅಸ್ಪತ್ರೆಗೆ ದಾಖಲಿಸಲಾಗಿದೆ.ಲಿಂಗದಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಹಾಗೂ ಕಾರು ಮತ್ತು ಆಟೋ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತನನ್ನು ಕಿರಣ್ (32) ಎಂದು ಗುರುತಿಸಲಾಗಿದೆ.

ಹಾಗೂ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಬೈಕ್ವೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಮರೇಶ್ ಬಸಯ್ಯ ಬೆನಕನಾಳಮಠ (21), ಶರಣಬಸಯ್ಯ ಬಸಯ್ಯ ಬೆನಕನಾಳಮಠ (16) ಮೃತರು. ಅಮಿನಗಡ ಹೊರವಲಯದ ರಾಜ್ಯ ಹೆದ್ದಾರಿ 20 ರಲ್ಲಿ ಘಟನೆ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read