ರಾಜಸ್ಥಾನದ ಝಲಾವರ್‌ನಲ್ಲಿ ಶುಕ್ರವಾರ ಬೆಳಿಗ್ಗೆ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಓರ್ವ ಶಿಕ್ಷಕ ಮೃತಪಟ್ಟಿದ್ದಾರೆ. ಘಟನೆಯಲ್ಲಿ 60 ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಅಧಿಕಾರಿಗಳು ಮತ್ತು ಸ್ಥಳೀಯರು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ.
ಪಿಪ್ಲೋಡಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಶುಕ್ರವಾರ ಕುಸಿದಿದ್ದು, 60 ಕ್ಕೂ ಹೆಚ್ಚು ಮಕ್ಕಳು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಧಿಕಾರಿಗಳು ಕ್ರೇನ್‌ಗಳ ಬಳಸಿ ಅವಶೇಷಗಳನ್ನು ತೆಗೆದುಹಾಕುತ್ತಿದ್ದಾರೆ.
ವರದಿಗಳ ಪ್ರಕಾರ, ಶುಕ್ರವಾರ ಬೆಳಿಗ್ಗೆ 8:30 ರ ಸುಮಾರಿಗೆ ಶಾಲಾ ದಿನ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಈ ಘಟನೆ ಸಂಭವಿಸಿದೆ. ಶಾಲಾ ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದು, ಭಾರೀ ಮಳೆಯಿಂದ ಘಟನೆ ಸಂಬಂಧಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸುತ್ತಾ, “ರಾಜಸ್ಥಾನದ ಝಲಾವರ್‌ನಲ್ಲಿರುವ ಶಾಲೆಯಲ್ಲಿ ಸಂಭವಿಸಿದ ಅಪಘಾತವು ದುರಂತ ಮತ್ತು ತೀವ್ರ ದುಃಖಕರವಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
VIDEO | Jhalawar, Rajasthan: Roof of Piplodi Primary School collapses, several children feared trapped. Rescue operations underway.#RajasthanNews #Jhalawar
— Press Trust of India (@PTI_News) July 25, 2025
(Full video available on PTI Videos – https://t.co/n147TvrpG7) pic.twitter.com/K0STKQwP0A