HomeLive NewsBIG UPDATE : ರಾಜ್ಯದ ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟ :...

BIG UPDATE : ರಾಜ್ಯದ ‘ದ್ವಿತೀಯ PUC’ ವಾರ್ಷಿಕ ಪರೀಕ್ಷೆ-1 ರ ಫಲಿತಾಂಶ ಪ್ರಕಟ : ಇಲ್ಲಿದೆ ಜಿಲ್ಲಾವಾರು ಸಂಪೂರ್ಣ ಮಾಹಿತಿ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-1 ದಿನಾಂಕ: 01-03-2025 ರಿಂದ 20-03-2025 ರವರೆಗೆ ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾದಂತ ನಡೆಸಲಾಗಿದ್ದು, ಇಂದು ಫಲಿತಾಂಶ ಪ್ರಕಟಗೊಂಡಿದೆ. ರಾಜ್ಯದ ಫಲಿತಾಂಶದ ಸಂಪೂರ್ಣ ಮಾಹಿತಿ ಇಲ್ಲಿದೆ.

ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ಒಟ್ಟು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025 ರಿಂದ 02-04-2025 ರವರೆಗೆ 28,092 ಮೌಲ್ಯಮಾಪಕರಿಂದ ನಡೆಸಲಾಯಿತು.

ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ, ವಿದ್ಯಾರ್ಥಿಗಳು https://karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು .
2025ರ ದ್ವಿತೀಯ ಪಿಯುಸಿ ಪರೀಕ್ಷೆ-2/ಪರೀಕ್ಷೆ-3ಕ್ಕೆ ಎಲ್ಲಾ ವರ್ಗದ ಬಾಲಕಿಯರು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮತ್ತು ವರ್ಗ-1ರ ಬಾಲಕರಿಗೆ ಪುನರಾವರ್ತಿತ/ಅಪೂರ್ಣ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಲು ಪರೀಕ್ಷಾ ಶುಲ್ಕ ಇರುವುದಿಲ್ಲ.
2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಹಾಜರಾತಿ ಕೊರತೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಪರೀಕ್ಷೆ-2/ಪರೀಕ್ಷೆ-3ಕ್ಕೆ ಮಂಡಲಿಯ ನಿಯಮಾನುಸಾರ ಖಾಸಗಿ ಅಭ್ಯರ್ಥಿಯಾಗಿ ನೋಂದಾಯಿಸಿಕೊಳ್ಳಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular