HomeKarnatakaBIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು

BIG UPDATE : ಬೆಳ್ತಂಗಡಿ ಪಟಾಕಿ ಘಟಕದಲ್ಲಿ ಸ್ಪೋಟ : ಮೂವರು ಸಾವು

ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗೋಳಿಯಂಗಡಿ ಹತ್ತಿರದ ಕಡ್‌ ತ್ಯಾರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಪೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್‌, ಹಾಸನ ನಾಯಕನಹಳ್ಳಿ ಚೇತನ್‌, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಸ್ಪೋಟದಲ್ಲಿ ಗಾಯಗೊಂಡಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular