HomeKarnatakaBIG UPDATE : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ...

BIG UPDATE : ಹುಲಿ ಉಗುರು ಕೇಸ್ : ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ ಪೆಂಡೆಂಟ್ ವಶಕ್ಕೆ

ಬೆಂಗಳೂರು : ಹುಲಿ ಉಗುರು ಪ್ರಕರಣ ಸಂಬಂಧ ಅರಣ್ಯಾಧಿಕಾರಿಗಳು ಇಂದು ಸ್ಯಾಂಡಲ್ ವುಡ್ ಸ್ಟಾರ್ ಗಳ ನಿವಾಸಕ್ಕೆ ಲಗ್ಗೆಯಿಟ್ಟಿದ್ದಾರೆ.

ನಟ ದರ್ಶನ್, ನಟ ಜಗ್ಗೇಶ್, ನಟ ನಿಖಿಲ್ ಕುಮಾರಸ್ವಾಮಿ, ನಟ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮನೆಯಲ್ಲಿ ಶೋಧ ನಡೆಸಿದ್ದಾರೆ.

ಅರಣ್ಯಾಧಿಕಾರಿಗಳು ನಟ ದರ್ಶನ್, ಜಗ್ಗೇಶ್, ನಿಖಿಲ್ ಮನೆಯಿಂದ ಪೆಂಡೆಂಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಆದರೆ ರಾಕ್ ಲೈನ್ ವೆಂಕಟೇಶ್ ನಿವಾಸದಲ್ಲಿ ಎಷ್ಟೇ ಜಾಲಾಡಿದರೂ ಯಾವುದೇ ಪೆಂಡೆಂಟ್ ಪತ್ತೆಯಾಗಿಲ್ಲ. ರಾಕ್ ಲೈನ್ ವೆಂಕಟೇಶ್ ವಿದೇಶ ಪ್ರವಾಸದಲ್ಲಿದ್ದು, ಅವರ ಅನುಪಸ್ಥಿತಿಯಲ್ಲಿ ಶೋಧ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ, ಮೂರೂ ಪೆಂಡೆಂಟ್ಗಳನ್ನು ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಅದರಲ್ಲಿರುವುದು ನಿಜವಾದ ಹುಲಿ ಉಗುರೇ, ಕೃತಕವೇ ಎನ್ನುವುದನ್ನು ಕಂಡು ಹಿಡಿಯಲಿದ್ದು, ನಂತರ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಈ ಬಗ್ಗೆ ಸ್ಪಷ್ಟನೆ ನೀಡಿದ ರಾಕ್ ಲೈನ್ ವೆಂಕಟೇಶ್ ಪುತ್ರ ಅಭಿಲಾಷ್ ‘ಅಪ್ಪ ವಿದೇಶ ಪ್ರವಾಸದಲ್ಲಿದ್ದಾರೆ, ಅವರು ಹುಲಿ ಉಗುರಿನ ಪೆಂಡೆಂಟ್ ಧರಿಸಿರೋದು ನಾನು ನೋಡಿಲ್ಲ., ಅಪ್ಪ ಬಂದ ಬಳಿಕ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular