BIG UPDATE : ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್ ಗೆ ಟ್ವಿಸ್ಟ್ : ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಬಯಲು

ಚಿತ್ರದುರ್ಗ :  ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರ ಪತ್ತೆ ಕೇಸ್  ಗೆ  ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪಾಳು ಬಿದ್ದ ಮನೆಯಲ್ಲಿ ಡೆತ್ ನೋಟ್ ಒಂದು ಪತ್ತೆಯಾಗಿದೆ. ಈ ಮೂಲಕ ಹೆಚ್ಚಿನ ತನಿಖೆ ನಡೆಸಲು ಪೊಲೀಸರಿಗೆ ಸಹಾಯವಾಗಿದೆ.

ಡೆತ್ ನೋಟ್ ನಲ್ಲೇನಿದೆ..?

ಮೃತ ಜಗನ್ನಾಥರೆಡ್ಡಿ ಪುತ್ರ ನರೇಂದ್ರರೆಡ್ಡಿ ವಿರುದ್ಧ ದರೋಡೆ ಕೇಸ್ ದಾಖಲಾಗಿತ್ತು. 2013ರಲ್ಲಿ ಖಾಸಗಿ ಕಂಪನಿಯೊಂದರಲ್ಲಿ ನರೇಂದ್ರ ರೆಡ್ಡಿ ಎಂಜಿನಿಯರ್ ಆಗಿದ್ದರು. ನರೇಂದ್ರ ಅವರು ತಮ್ಮ ಗೆಳೆಯರ ಜೊತೆ ತೆರಳಿ ದರೋಡೆ ಕೇಸಲ್ಲಿ ಭಾಗಿ ಆಗಿದ್ದರು, ಆದ ಕಾರಣ ಇದೇ ವರ್ಷ ಬಿಡದಿ ಬಳಿ ಅವರ ವಾಹನವನ್ನು ತಡೆದು ದರೋಡೆ ಕೇಸ್ ದಾಖಲು ಮಾಡಲಾಗಿತ್ತು. ದರೋಡೆ ಕೇಸಲ್ಲಿ ಜೈಲುಶಿಕ್ಷೆ ಕೂಡ ಅನುಭವಿಸಿದ್ದರು. ಈ ಹಿನ್ನೆಲೆ ಮನನೊಂದ ಕುಟುಂಬ 2019ರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದೆ. ಜಗನ್ನಾಥರೆಡ್ಡಿ ಮನೆಯಲ್ಲಿದ್ದ ಒಂದು ಸಾಕುನಾಯಿ ಸಹ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಸಮೀಪದ ಜೈಲ್ ರಸ್ತೆಯಲ್ಲಿ ಇರುವ ಮನೆಯಲ್ಲಿ ಅಸ್ತಿಪಂಜರಗಳು ಪತ್ತೆಯಾಗಿವೆ. ಲೋಕೋಪಯೋಗಿ ಇಲಾಖೆ ನಿವೃತ್ತ ಇಂಜಿನಿಯರ್ ಜಗನ್ನಾಥ ರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥ ರೆಡ್ಡಿ, ಅವರ ಪತ್ನಿ, ಪುತ್ರಿ, ಪುತ್ರರು ವಾಸವಾಗಿದ್ದರು. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಆಧರಿಸಿ ಪಾಳು ಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ 5 ಅಸ್ಥಿಪಂಜರಗಳು ಪತ್ತೆಯಾಗಿವೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read