HomeLatest NewsBIG UPDATE: ಬೆಂಗಳೂರಲ್ಲಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ಸ್ಥಳದಲ್ಲೇ ಸಾವು

BIG UPDATE: ಬೆಂಗಳೂರಲ್ಲಿ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮಡಿವಾಳದ ಸಿದ್ದಾರ್ಥ ಕಾಲೋನಿಯಲ್ಲಿ ಘಟನೆ ನಡೆದಿದೆ.

ಲಾಲ್ ಮದನ್(33), ರಜಾವುದ್ದಿನ್(30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಸುಮಾರು 20 ಅಡಿಗಳಷ್ಟು ಮಣ್ಣು ತೆಗೆಯಲಾಗಿತ್ತು. ಪಿಲ್ಲರ್ ಗಾಗಿ 20 ಅಡಿಗೂ ಹೆಚ್ಚು ಮಣ್ಣು ತೆಗೆದಿದ್ದು ಕೆಳಗೆ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರ ಮೇಲೆ ದಿಢೀರ್ ಮಣ್ಣು ಬಿದ್ದಿದೆ.

ಮೂವರು ಕಾರ್ಮಿಕರ ಮೇಲೆ ದಿಢೀರ್ ಮಣ್ಣು ಕುಸಿತವಾಗಿದ್ದರಿಂದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಮಡಿವಾಳ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular